ADVERTISEMENT

ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಜಾಗದ ಬೇಡಿಕೆ

ಆರೂರು ಪಂಚಾಯಿತಿ ಕೆ.ಡಿ.ಪಿ ಸಭೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 6:19 IST
Last Updated 13 ಜುಲೈ 2024, 6:19 IST
ಆರೂರು ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಪ್ರಥಮ ಕೆ.ಡಿ.ಪಿ ಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಎ.ಗುರುರಾಜ್ ರಾವ್  ಅಧ್ಯಕ್ಷತೆಯಲ್ಲಿ ನಡೆಯಿತು
ಆರೂರು ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಪ್ರಥಮ ಕೆ.ಡಿ.ಪಿ ಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಎ.ಗುರುರಾಜ್ ರಾವ್  ಅಧ್ಯಕ್ಷತೆಯಲ್ಲಿ ನಡೆಯಿತು   

ಬ್ರಹ್ಮಾವರ: ಆರೂರು ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಪ್ರಥಮ ಕೆ.ಡಿ.ಪಿ ಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಎ.ಗುರುರಾಜ್ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಚಟ್ಟರೆಕಲ್ಲು ಅಂಗನವಾಡಿ ನಿರ್ಮಾಣ ಮಾಡಲು ಜಾಗದ ಬೇಡಿಕೆ ಇಡಲಾಯಿತು. ಆರೋಗ್ಯ ಇಲಾಖೆಯಿಂದ ಡೆಂಗಿ ಕುರಿತು ಹೆಚ್ಚಿನ ಎಚ್ಚರಿಕೆ ವಹಿಸಲು ಮಾಹಿತಿ ನೀಡಿ ಕರಪತ್ರ ವಿತರಣೆ ಮಾಡಲಾಯಿತು.

ಸಭೆಗೆ ಹಾಜರಾಗದೇ ಇರುವ ವಿವಿಧ ಇಲಾಖೆಯ ಅಧಿಕಾರಿಗಳ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಅಧ್ಯಕ್ಷ ಎ.ಗುರುರಾಜ ರಾವ್‌ ತಿಳಿಸಿದರು. ಪಿಡಿಒ ಪ್ರಮಿತ ನಿರೂಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.