
ಸವಿತಾ ಶಾಸ್ತ್ರಿ
ಬ್ರಹ್ಮಾವರ: ಕೋಟ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟ ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ, ಕೋಟ ನೆನಪು ಮತ್ತು ಉಸಿರು ಕೋಟ ಸಹಯೋಗದೊಂದಿಗೆ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಮಾ.15ರಂದು ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ 4ನೇ ಮಹಿಳಾ ಕಾಲಮಿತಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸವಿತಾ ಮಾಧವ ಶಾಸ್ತ್ರಿ ಅವರನ್ನು ಆಯ್ಕೆ ಮಾಡಲಾಗಿದೆ.
ಮೂರು ಕಥಾ ಸಂಕಲನ, ಕಥೆಗಳು ಹಾಸ್ಯ ಬರಹಗಳು ನಾಡಿನ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ. ಹಲವಾರು ರಾಜ್ಯ ಮಟ್ಟದ ಸಾಹಿತ್ಯಿಕ ಸ್ಪರ್ಧೆಯಲ್ಲಿ ಪುರಸ್ಕಾರ ಗಳಿಸಿದ್ದಾರೆ. ಅವರ ಕಥೆ ತೆಲುಗಿಗೆ ಅನುವಾದಗೊಂಡಿದ್ದು ಕೆನಡಾದ ತಂಡ ಕಿರುಚಿತ್ರವನ್ನೂ ನಿರ್ಮಿಸುತ್ತಿದೆ ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ ಕುಂದರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪಂಚಾಯಿತಿ ಪಿಡಿಓ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಕಾರ್ಯಕ್ರಮ ನಿರ್ದೇಶಕಿ ಸುಶೀಲಾ ಸೋಮಶೇಖರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.