ಸಾವು
ಪ್ರಾತಿನಿಧಿಕ ಚಿತ್ರ
ಬ್ರಹ್ಮಾವರ: ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೊಬ್ಬರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಸಮೀಪ ಬುಧವಾರ ಸಂಭವಿಸಿದೆ.
ಅಚ್ಲಾಡಿ ಅಂಬೇಡ್ಕರ್ ಕಾಲನಿ ನಿವಾಸಿ ಶರತ್ (32) ಮೃತಪಟ್ಟವರು.
ಇವರು ಮನೆ ಸಮೀಪದ ತೆಂಗಿನಕಾಯಿ ಗುತ್ತಿಗೆದಾರರ ಜತೆ ಅಚ್ಲಾಡಿಯ ತೋಟವೊಂದಕ್ಕೆ ಕೆಲಸಕ್ಕೆ ತೆರಳಿದ್ದು ಮರದಿಂದ ಕಾಯಿ ಕೊಯ್ದು ಟೆಂಪೋಗೆ ಲೋಡ್ ಮಾಡುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಿದರು ಪತ್ತೆಯಾಗಿರಲಿಲ್ಲ. ಮಧ್ಯಾಹ್ನ ಕೈಲೇರಿ ಸಮೀಪದ ತೋಡಿನಲ್ಲಿ ಶವ ಪತ್ತೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.