
ಬ್ರಹ್ಮಾವರ: ಇಲ್ಲಿನ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಬೈಕಾಡಿ ಸಲ್ವಡೋರ್ ನೊರೊನ್ಹಾ ಈಜುಕೊಳದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲೆ ಬಾಲಕ ಬಾಲಕಿಯರ ಈಜು ಸ್ಪರ್ಧೆಯ ಸಮಾರೋಪ ಸಮಾರಂಭ ನಡೆಯಿತು.
ಪ್ರಣವ್ ಆಸ್ಪತ್ರೆಯ ಡಾ.ಪ್ರವೀಣ ಕುಮಾರ್, ಮಣಿಪಾಲ ಜೂನಿಯರ್ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ದಿನೇಶ ಕುಮಾರ್ ವಿಜೇತರಿಗೆ ಬಹುಮಾನ ವಿತರಿಸಿದರು. ‘ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಡೆಸುತ್ತಿರುವ ವಿವಿಧ ಸ್ಪರ್ಧೆಗಳಿಂದ ಕ್ರೀಡಾಪಟುಗಳಿಗೆ ಕ್ಷಮತೆ ಹೆಚ್ಚಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ’ ಎಂದು ಶ್ಲಾಘಿಸಿದರು.
ಕ್ಲಬ್‌ನ ಗೌರವಾಧ್ಯಕ್ಷ ಎಂ. ಚಂದ್ರಶೇಖರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಅಂತರರಾಷ್ಟ್ರೀಯ ಕ್ರೀಡಾಪಟು ಲಚ್ಚೇಂದ್ರ ಅವರು ವಿಜೇತರಿಗೆ ಪ್ರಮಾಣಪತ್ರ, ಪದಕ ನೀಡಿ ಗೌರವಿಸಿದರು. ಕಾರ್ಯದರ್ಶಿ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ, ಎಸ್.ಎಂ.ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಸುಶೀಲಾ ಆರ್. ರೈ, ಸ್ಪೋರ್ಟ್ಸ್ ಕ್ಲಬ್‌ನ ಕಾರ್ಯಕಾರಿ ಸಮಿತಿ ಸದಸ್ಯರಾದ ಮೋಹನ್, ದೇವದಾಸ ಶೆಟ್ಟಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.