ADVERTISEMENT

ಲವ್‌ ಜಿಹಾದ್‌ಗೆ ಬ್ರಾಹ್ಮಣರು ಗುರಿ: ಸಚ್ಚಿದಾನಂದ ಮೂರ್ತಿ

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಆರೋಪ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2021, 16:30 IST
Last Updated 28 ಫೆಬ್ರುವರಿ 2021, 16:30 IST
   

ಉಡುಪಿ: ಹಿಂದುತ್ವ ಹಾಗೂ ಬ್ರಾಹ್ಮಣ ವಿರೋಧಿಗಳು ಲವ್‌ಜಿಹಾದ್‌ಗೆ ಬ್ರಾಹ್ಮಣರ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಆರೋಪಿಸಿದರು.

ನಗರದ ದೊಡ್ಡಣಗುಡ್ಡೆಯಲ್ಲಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತು ಭಾನುವಾರ ಹಮ್ಮಿಕೊಂಡಿದ್ದ ಬ್ರಾಹ್ಮೀ ಸಭಾಭವನ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ಲವ್‌ಜಿಹಾದ್ ಪ್ರಕರಣಗಳಲ್ಲಿ ಬ್ರಾಹ್ಮಣರ ಹೆಣ್ಣುಮಕ್ಕಳು ಸಿಲುಕಿದ್ದಾರೆ. ಉತ್ತರ ಕನ್ನಡ, ಶಿರಸಿಯಲ್ಲಿ ಹೆಚ್ಚು ಪ್ರಕರಣಗಳು ನಡೆದಿವೆ ಎಂದರು.

ಬ್ರಾಹ್ಮಣರಲ್ಲಿರುವ ಎಲ್ಲ ಉಪ ಜಾತಿಗಳು ಒಟ್ಟಾಗಿ ಸಂಘಟಿತರಾಗಬೇಕು. ಸಾಹಿತ್ಯ, ಸಿನಿಮಾ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸಮುದಾಯದ ಅವಹೇಳನ ಹೆಚ್ಚಾಗುತ್ತಿದ್ದು, ಇದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ADVERTISEMENT

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 347 ಕೋಟಿ ಅನುದಾನ ನೀಡಲು ಸರ್ಕಾರ ಭರವಸೆ ನೀಡಿದೆ. ಬ್ರಾಹ್ಮಣ ಸಮುದಾಯ ಭವನ ಸೇರಿದಂತೆ ಸಮುದಾಯದ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಸ್ವಾಮೀಜಿ, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಮಾತನಾಡಿದರು. ಶಾಸಕ ಕೆ. ರಘುಪತಿ ಭಟ್, ಕರ್ಣಾಟಕ ಬ್ಯಾಂಕ್ ಮಂಗಳೂರು ಸಿಇಒ ಹಾಗೂ ಎಂಡಿ ಎಂ.ಎಸ್. ಮಹಾಬಲೇಶ್ವರ, ಸಂಘದ ಮುಖಂಡರಾದ ವಿಷ್ಣುಪ್ರಸಾದ್ ಪಾಡಿಗಾರ್, ರಂಜನ್ ಕಲ್ಕೂರ, ಪ್ರವೀಣ್ ಉಪಾಧ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.