ADVERTISEMENT

ಬ್ರಹ್ಮಾವರ: ಕೊರಗ ಸಮುದಾಯದ ಸಾಧಕಿಯರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2025, 12:30 IST
Last Updated 18 ಮಾರ್ಚ್ 2025, 12:30 IST
ಬೆಂಗಳೂರಿನಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಬುಡಕಟ್ಟು ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು
ಬೆಂಗಳೂರಿನಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಬುಡಕಟ್ಟು ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು   

ಬ್ರಹ್ಮಾವರ: ಬೆಂಗಳೂರಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜಿಸಲಾದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ರಾಜ್ಯದ ಬುಡಕಟ್ಟು ಮಹಿಳಾ ಸಾಧಕಿಯರೊಂದಿಗೆ ಉಡುಪಿ ಜಿಲ್ಲೆಯ ಕೊರಗ ಸಮುದಾಯದ ಡಾಕ್ಟರೇಟ್ ಪದವೀಧರರಾದ ಸಬಿತಾ ಗುಂಡ್ಮಿ, ಕಲಾವತಿ ಸೂರಾಲು ಅವರನ್ನು ಸನ್ಮಾನಿಸಲಾಯಿತು.

ಬ್ರಹ್ಮಾವರ ತಾಲ್ಲೂಕಿನ ಸಾಸ್ತಾನ ಸಮೀಪದ ಗುಂಡ್ಮಿಯ ಸಬಿತಾ ಅವರು ಪಿ.ವಿ.ಟಿ.ಜಿ ಬುಡಕಟ್ಟು ಮಹಿಳೆಯರಲ್ಲಿ ಡಾಕ್ಟರೇಟ್ ಪದವಿ ಪಡೆದ ಪ್ರಥಮ ಮಹಿಳೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಮಾಜಶಾಸ್ತ್ರದ ಸಹಾಯಕ ಪ್ರಾಧ್ಯಾಪಕಿ. 

ಕಲಾವತಿ ಅವರು ಕರ್ಜೆ ಸಮೀಪದ ಸೂರಾಲಿನವರಾಗಿದ್ದು, ಹಂಪಿ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದು, ಮೈಸೂರಿನಲ್ಲಿ ಸಂಶೋಧನಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.