ADVERTISEMENT

ಹೆದ್ದಾರಿ ಅವ್ಯವಸ್ಥೆ: ತುಳುನಾಡು ರಕ್ಷಣಾ ವೇದಿಕೆಯಿಂದ ಮನವಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 14:25 IST
Last Updated 8 ಆಗಸ್ಟ್ 2024, 14:25 IST
ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾ ತುಳುನಾಡು ರಕ್ಷಣಾ ವೇದಿಕೆಯಿಂದ ಮನವಿ ನೀಡಲಾಯಿತು
ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾ ತುಳುನಾಡು ರಕ್ಷಣಾ ವೇದಿಕೆಯಿಂದ ಮನವಿ ನೀಡಲಾಯಿತು   

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ, ಸಂತೆಕಟ್ಟೆ, ಬ್ರಹ್ಮಾವರದ ಹಲವು ಸಮಸ್ಯೆಗಳನ್ನು ಸರಿಪಡಿಸುವಂತೆ ಜಿಲ್ಲಾ ತುಳುನಾಡು ರಕ್ಷಣಾ ವೇದಿಕೆಯಿಂದ ಶಾಸಕ ಯಶ್‌ಪಾಲ್‌ ಸುವರ್ಣ, ಹೈವೇ ಪ್ರಾಧಿಕಾರ ಅಧಿಕಾರಿಗಳಿಗೆ ಮನವಿ ನೀಡಲಾಯಿತು.

ಮಿನಿ ವಿಧಾನಸೌಧದಲ್ಲಿ ಮನವಿ ನೀಡಿದ ವೇದಿಕೆ ಸದಸ್ಯರು, ಜಿಲ್ಲೆಯ ಜನರ ಸಮಸ್ಯೆ ನಿವಾರಿಸಲು ಜನರ ಧ್ವನಿಯಾಗಿ ತುಳುನಾಡ ರಕ್ಷಣಾ ವೇದಿಕೆ ಹೋರಾಟ ಮಾಡುತ್ತಾ ಬಂದಿದೆ. ಹೆದ್ದಾರಿಯ ಅನೇಕ ಕಡೆ ಆಗಿರುವ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ ದೊರಕಬೇಕು ಎಂದು ಆಗ್ರಹಿಸಿದರು.

ವೇದಿಕೆಯ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜ, ಜಿಲ್ಲಾಧ್ಯಕ್ಷ ಕೃಷ್ಣಕುಮಾರ್, ಬ್ರಹ್ಮಾವರ ತಾಲ್ಲೂಕು ಅಧ್ಯಕ್ಷ ಸತೀಶ ಪೂಜಾರಿ, ಉಪಾಧ್ಯಕ್ಷ ಜಯರಾಮ ಪೂಜಾರಿ, ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ, ಪ್ರಧಾನ ಕಾರ್ಯದರ್ಶಿ ಅಜರುದ್ದೀನ್, ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ, ಕೋಶಾಧಿಕಾರಿ ಸುನಂದಾ, ಕಾಪು ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ, ಸಾಹಬುದ್ದೀನ್, ಮಜೀದ್, ಪ್ರೀತಂ, ಸಂಗೀತಾ ಶೆಟ್ಟಿ, ಜ್ಯೋತಿ, ರಂಜಿತ ಶೆಟ್ಟಿ, ವಿನೋದ, ರಜತ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.