ಸಾಸ್ತಾನ(ಬ್ರಹ್ಮಾವರ): ಕೋಡಿ ಗ್ರಾಮ ಪಂಚಾಯಿತಿ, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆ, ಉಡುಪಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೋಡಿಬೆಂಗ್ರೆಯ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸ್ತನ್ಯಪಾನ ಸಪ್ತಾಹ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಹಿಳಾ ದೌರ್ಜನ್ಯ ನಿಷೇಧ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.
ಕೋಡಿ ಗ್ರಾ.ಪಂ. ಅಧ್ಯಕ್ಷೆ ಗೀತಾ ಕಾರ್ವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋಡಿ ಆರೋಗ್ಯ ಇಲಾಖೆ ಪಿಎಚ್‌ಸಿಒ ಅಮಿತ, ಸ್ತನ್ಯಪಾನದ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಸಂಯೋಜಕಿ ಶಾರದಾ, ಬಾಲ್ಯ ವಿವಾಹ ನಿಷೇಧ ಮತ್ತು ಮಹಿಳಾ ದೌರ್ಜನ್ಯ ನಿಷೇಧ ಕಾಯ್ದೆ ಬಗ್ಗೆ ತರಬೇತಿ ನೀಡಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಲೋಚನಾ, ಸಿಎಚ್‌ಒ ಪರಸಪ್ಪ, ಪೋಷಕರು ಹಾಗೂ ಸ್ತ್ರಿಶಕ್ತಿ ಸಂಘದವರು, ಪುಟಾಣಿಗಳು ಇದ್ದರು. ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಗನವಾಡಿ ಶಿಕ್ಷಕಿ ಯಮುನಾ ಎಲ್. ಕುಂದರ್ ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ಜ್ಯೋತಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.