ADVERTISEMENT

ಲಂಚ ಮುಕ್ತ ಕರ್ನಾಟಕ ಅಭಿಯಾನ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 15:47 IST
Last Updated 5 ಮಾರ್ಚ್ 2021, 15:47 IST

ಉಡುಪಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಫೆ.6ರಂದು ಲಂಚ ಮುಕ್ತ ಕರ್ನಾಟಕ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಕಿರಣ್ ಕುಮಾರ್ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ನೇತೃತ್ವದ ರಾಜ್ಯ ಸಮಿತಿ ಶನಿವಾರ ಉಡುಪಿ ತಾಲ್ಲೂಕು ಕಚೇರಿ ಹಾಗೂ ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿನೀಡಿ ಲಂಚ ಮುಕ್ತ ಅಭಿಯಾನ ನಡೆಸಲಿದೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಅಧಿಕಾರಿಗಳು ಲಂಚ ಕೇಳಿದರೆ, ಸತಾಯಿಸುತ್ತಿದ್ದರೆ ಕೆಆರ್‌ಎಸ್‌ ಪಕ್ಷದ ಮುಖಂಡರನ್ನು ಸಂಪರ್ಕಿಸಬಹುದು ಎಂದರು.

ಕರ್ನಾಟಕ ರಾಷ್ಟ್ರಸಮಿತಿ ಸ್ವಚ್ಛ ಪ್ರಾಮಾಣಿಕ ಹಾಗೂ ಜನಪರ ರಾಜಕಾರಣಕ್ಕಾಗಿ 2019ರಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವಾಗಿ ಸ್ಥಾಪನೆಯಾಗಿದೆ. ಪಕ್ಷ ಸ್ಥಾಪನೆಯಾಗಿ ಒಂದೂವರೆ ವರ್ಷದಲ್ಲಿ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆಯಲಾಗಿದೆ. ನ್ಯಾಯಬದ್ಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯುವುದು ಪ್ರಜೆಗಳ ಹಕ್ಕು. ಸರ್ಕಾರಿ ಕಚೇರಿಗಳಲ್ಲಿ ಸೇವೆಗಳನ್ನು ಪಡೆಯಲು ಯಾರೂ ಲಂಚ ನೀಡಬಾರದು ಎಂದು ಕಿರಣ್ ಮನವಿ ಮಾಡಿದರು.

ADVERTISEMENT

ಲಂಚಮುಕ್ತ ಕರ್ನಾಟಕ ಅಭಿಯಾನದ ಬಗ್ಗೆ ಹೆಚ್ಚಿನ ಮಾಹಿತಿಗೆ ಕಿರಣ್‌: 9844475463, 8861912459 ಸಂಪರ್ಕಿಸಬಹುದು. ಕೆಆರ್‌ಎಸ್‌ ಪಕ್ಷವು ಮುಂದೆ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸಲಿದ್ದು, ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳಾಗಲು ಬಯಸುವವರು ಸಂಪರ್ಕಿಸಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಮತಾ ಅಮೀನ್‌, ರೇಷ್ಮಾ, ಸಂಧ್ಯಾ, ಸಲೀಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.