ADVERTISEMENT

ಬ್ರಹ್ಮಾವರ: ಮೆಸ್ಕಾಂ ಸಹಾಯಕ ಎಂಜಿನಿಯರ್‌ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 10:44 IST
Last Updated 6 ಜೂನ್ 2025, 10:44 IST
<div class="paragraphs"><p>ಅಶೋಕ್‌ ಪೂಜಾರಿ</p></div>

ಅಶೋಕ್‌ ಪೂಜಾರಿ

   

ಉಡುಪಿ: ಬ್ರಹ್ಮಾವರದ ಮೆಸ್ಕಾಂ ಸಹಾಯಕ ಎಂಜಿನಿಯರ್‌ (ಎ.ಇ) ತಮ್ಮ ಕಚೇರಿಯಲ್ಲಿ ₹20 ಸಾವಿರ ಲಂಚದ ಹಣ ಪಡೆಯುತ್ತಿದ್ದಾಗ ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಅಶೋಕ್ ಪೂಜಾರಿ‌ (46) ಬಂಧಿತ ಆರೋಪಿ. ದಿನೇಶ್ ಪೂಜಾರಿ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಇವರು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ದಿನೇಶ್‌ ಅವರು ಈ ವಿಚಾರವನ್ನು ಲೋಕಾಯುಕ್ತ ಪೊಲೀಸರ ಗಮನಕ್ಕೆ ತಂದಿದ್ದರು.

ADVERTISEMENT

ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿ, ನಗದು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್‌ಪಿ ಕುಮಾರ್‌ಚಂದ್ರ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಮಂಜುನಾಥ್, ಭಾರತಿ, ರಾಜೇಂದ್ರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.