ADVERTISEMENT

ಉಡುಪಿ | ಬುಧವಾರದಿಂದ ಬಸ್‌ ಸಂಚಾರ ಆರಂಭ

ಅನವಶ್ಯಕವಾಗಿ ಓಡಾಟ ತಡೆಗೆ ಗಡಿಯಲ್ಲಿ ಚೆಕ್‌ಪೋಸ್ಟ್‌: ಡಿಸಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 16:41 IST
Last Updated 21 ಜುಲೈ 2020, 16:41 IST

ಉಡುಪಿ: ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಯುವುದಿಲ್ಲ ಎಂಬ ಮುಖ್ಯಮಂತ್ರಿ ಸೂಚನೆಯಂತೆ ಜಿಲ್ಲೆಯಲ್ಲಿ ಬುಧವಾರದಿಂದಲೇ ಬಸ್ ಸಂಚಾರ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆಯೇ ಬಸ್‌ಗಳು ಸಂಚರಿಸಬೇಕು. ಓಡಿಸುವ ಮುನ್ನ ಸ್ಯಾನಿಟೈಸ್‌ ಮಾಡಬೇಕು. ಸಾರ್ವಜನಿಕರು ಬಸ್‌ನಲ್ಲಿ ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್‌ ಧರಿಸಬೇಕು ಎಂದು ಡಿಸಿ ಸೂಚನೆ ನೀಡಿದ್ದಾರೆ.

ಜಿಲ್ಲೆಯಿಂದ ಅನವಶ್ಯಕವಾಗಿ ಹೊರಹೋಗುವಂತಿಲ್ಲ, ಒಳ ಬರುವಂತಿಲ್ಲ. ತುರ್ತು ಕೆಲಸಗಳಿದ್ದರೆ ಹಾಗೂ ಚಿಕಿತ್ಸೆಗೆ ಮಾತ್ರ ಬರಬಹುದು, ಹೋಗಬಹುದು. ಅನವಶ್ಯಕ ಜನ ಸಂಚಾರ ತಪ್ಪಿಸಲು ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.