ADVERTISEMENT

ಮುಷ್ಕರ ಸಡಿಲ: ರಸ್ತೆಗಿಳಿದ 13 ಕೆಎಸ್‌ಆರ್‌ಟಿಸಿ ಬಸ್‌

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 15:04 IST
Last Updated 11 ಏಪ್ರಿಲ್ 2021, 15:04 IST
ಸಾರಿಗೆ ಮುಷ್ಕರದ ದಿನವಾದ ಬುಧವಾರ ಉಡುಪಿಯ ನಿಟ್ಟೂರಿನಲ್ಲಿರುವ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ನಿಂತಿರುವ ಬಸ್‌ಗಳು
ಸಾರಿಗೆ ಮುಷ್ಕರದ ದಿನವಾದ ಬುಧವಾರ ಉಡುಪಿಯ ನಿಟ್ಟೂರಿನಲ್ಲಿರುವ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ನಿಂತಿರುವ ಬಸ್‌ಗಳು   

ಉಡುಪಿ: ಜಿಲ್ಲೆಯಲ್ಲಿ ಸಾರಿಗೆ ಮುಷ್ಕರ ಸಡಿಲವಾಗುತ್ತಿದ್ದು, ಭಾನುವಾರ 13 ಕೆಎಸ್‌ಆರ್‌ಟಿಸಿ ಬಸ್‌ಗಳು ಉಡುಪಿಯಿಂದ ವಿವಿಧ ಮಾರ್ಗಗಳಲ್ಲಿ ಸಂಚಾರ ಮಾಡಿದವು.

ಬೆಳಗಾವಿ, ಮೈಸೂರು, ಬೆಂಗಳೂರು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಕಾರ್ಕಳ, ಪಡುಕೆರೆ ಸೇರಿದಂತೆ ಹಲವು ಭಾಗಗಳಿಗೆ ಸಾರಿಗೆ ಸಂಸ್ಥೆಯ ಬಸ್‌ಗಳು ಸಂಚರಿಸಿದವು ಎಂದು ಡಿಪೋ ಅಧಿಕಾರಿಗಳು ಮಾಹಿತಿ ನೀಡಿದರು.

ಮುಷ್ಕರ ಆರಂಭವಾದ ದಿನ ಉಡುಪಿ ನಿಲ್ದಾಣದಿಂದ ಒಂದು ಬಸ್ ಮಾತ್ರ ಸಂಚರಿಸಿತ್ತು. ನಂತರದ ದಿನಗಳಲ್ಲಿ ಬಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ 13 ಬಸ್‌ಗಳು ಸಂಚರಿಸಿವೆ. ಕೆಲವು ಚಾಲಕರು ಹಾಗೂ ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಕ್ರಮೇಣ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಮತ್ತೊಂದೆಡೆ, ಖಾಸಗಿ ಬಸ್‌ಗಳ ಸಂಚಾರ ಎಂದಿನಂತಿತ್ತು. ಜಿಲ್ಲಾ ವ್ಯಾಪ್ತಿ ಸೇರಿದಂತೆ ಹೊರ ಜಿಲ್ಲೆಗಳಿಗೆ ಹೆಚ್ಚಿನ ಬಸ್‌ಗಳು ಓಡಾಡಿದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.