ADVERTISEMENT

ಬೈಂದೂರು: ಹಿಜಾಬ್, ಕೇಸರಿ ಶಾಲು ಧರಿಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 6:05 IST
Last Updated 7 ಫೆಬ್ರುವರಿ 2022, 6:05 IST
ಬಣ್ಣ ಬಣ್ಣದ ವೈವಿಧ್ಯಮಯ ನಕಾಬ್‌ (ಹಿಜಾಬ್‌) –ಸಾಂದರ್ಭಿಕ ಚಿತ್ರ
ಬಣ್ಣ ಬಣ್ಣದ ವೈವಿಧ್ಯಮಯ ನಕಾಬ್‌ (ಹಿಜಾಬ್‌) –ಸಾಂದರ್ಭಿಕ ಚಿತ್ರ   

ಉಡುಪಿ: ಬೈಂದೂರು ತಾಲ್ಲೂಕಿನ ಉಪ್ಪುಂದ ಪ್ರೌಢಶಾಲೆಯಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಹಾಗೂ ಕೇಸರಿಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶ ನೀಡಲಾಗಿದೆ.

ಪರೀಕ್ಷೆ ನಡೆಯುತ್ತಿರುವುದರಿಂದ ಶಾಲಾ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದ್ದು, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಹಾಗೂ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ತರಗತಿಯಲ್ಲಿ ಒಟ್ಟಿಗೆ ಕುಳಿತು ಪರೀಕ್ಷೆ ಬರೆಯುತ್ತಿದ್ದಾರೆ.

ಕಂಬದಕೋಣೆ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ಗಂಗೊಳ್ಳಿ ಎಸ್‌ವಿಎಸ್ ಕಾಲೇಜಿನಲ್ಲಿ ಹಿಜಾಬ್‌ಗೆ ಅವಕಾಶ ಕೋರಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.