ಬೈಂದೂರು: ತ್ರಾಸಿ ಮರವಂತೆ ಬೀಚ್‌ನಲ್ಲಿ ಶನಿವಾರ ಸಂಜೆ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭಾರೀ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು, ಗೋವಾ ಮೂಲದ ಓರ್ವ ಮಹಿಳೆ ಸೇರಿದಂತೆ ಐವರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದರು.
ಸಿಬ್ಬಂದಿ ಪೃಥ್ವಿರಾಜ್ ಉಪ್ಪುಂದ, ಪ್ರಮೋದ್ ರಾಜ್ ಉಪ್ಪುಂದ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಆಂಬುಲೆನ್ಸ್ ಸಿಬ್ಬಂದಿ ಇಬ್ರಾಹಿಂ ಗಂಗೊಳ್ಳಿ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಬಳಿಕ ಗಂಗೊಳ್ಳಿ ಪೊಲೀಸ್ ನಿರೀಕ್ಷಕ, ಸಿಬ್ಬಂದಿ, ಒನ್ ಟು ಸಿಬ್ಬಂದಿ, ಹೈವೇ ಪೆಟ್ರೋಲ್ ಸಿಬ್ಬಂದಿ ಸೈರನ್ ಮೊಳಗಿಸಿ ಸುರಕ್ಷತೆ ದೃಷ್ಟಿಯಿಂದ ಪ್ರವಾಸಿಗರನ್ನು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.