ADVERTISEMENT

ಪೃಥ್ವಿ ಪೂಜಾರಿ ಪ್ರಕರಣ: ಅ. 10ರಂದು ತೀರ್ಪು ಪ್ರಕಟ

ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಕರಣ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 9:05 IST
Last Updated 27 ಸೆಪ್ಟೆಂಬರ್ 2019, 9:05 IST
ಪೃಥ್ವಿ ಪೂಜಾರಿ
ಪೃಥ್ವಿ ಪೂಜಾರಿ   

ಉಡುಪಿ: ರಾಷ್ಟ್ರೀಯ ಕ್ರೀಡಾಪಟು ಪೃಥ್ವಿ ಪೂಜಾರಿ (17) ಎಂಬ ಯುವತಿಯ ಆತ್ಮಹತ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಅ.10ರಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

2011ರಲ್ಲಿ ಪೃಥ್ವಿ ಪೂಜಾರಿ ಬ್ರಹ್ಮಾವರದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಪತ್ರದಲ್ಲಿ ಯುವಕನೊಬ್ಬ ಪ್ರೀತಿಸುವಂತೆ ಪೀಡಿಸುತ್ತಿದ್ದ ಎಂಬ ಅಂಶವನ್ನು ಬರೆದಿಟ್ಟಿದ್ದರು. ಇದರ ಆಧಾರದ ಮೇಲೆ ಪೊಲೀಸರು ಯುವಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಪೋಲ್‌ವಾಲ್ಟ್‌ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದ ಪೃಥ್ವಿ ಪೂಜಾರಿ ಪ್ರತಿಭಾನ್ವಿತ ಕ್ರೀಡಾಪಟು ಎಂಬ ಹೆಸರು ಪಡೆದಿದ್ದರು. ಆಕೆಯ ಸಾವಿನ ಪ್ರಕರಣ ಜಿಲ್ಲೆಯಾದ್ಯಂತ ತೀವ್ರ ಸದ್ದು ಮಾಡಿತ್ತು. ಸಾವಿಗೆ ಕಾರಣನಾದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಬಿಲ್ಲವ ಸಂಘಟನೆ ಸೇರಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.ಇದೀಗ ಪ್ರಕರಣದ ಸುದೀರ್ಘ ವಿಚಾರಣೆ ಪೂರ್ಣಗೊಂಡಿದ್ದು, ಅ.10ರಂದು ತೀರ್ಪು ಹೊರಬೀಳಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.