ADVERTISEMENT

ಜಾತಿ ಜನಗಣತಿ ವರದಿ ಬಹಿರಂಗವಾಗದೆ ಚರ್ಚೆ ಅನಗತ್ಯ: ಕೆ.ಜಯಪ್ರಕಾಶ್ ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2024, 20:05 IST
Last Updated 4 ಮಾರ್ಚ್ 2024, 20:05 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಉಡುಪಿ: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿ ಜನಗಣತಿ) ಬಹಿರಂಗವಾಗದಿದ್ದರೂ ಜಾತಿಗಳ ಬಲಾಬಲದ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಅನಗತ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು.

ಸೋಮವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ಈಚೆಗಷ್ಟೆ ಸರ್ಕಾರಕ್ಕೆ ಸಲ್ಲಿಸಿದೆ. ಸರ್ಕಾರ ಸಚಿವ ಸಂಪುಟದ ಮುಂದಿಟ್ಟ ಬಳಿಕ ವರದಿಯಲ್ಲಿರುವ ಸರಿ–ತಪ್ಪುಗಳ ಬಗ್ಗೆ ಚರ್ಚೆ ನಡೆಯಬೇಕು. ವರದಿ ಬಹಿರಂಗವಾಗದೆ, ಅದರೊಳಗಿರುವ ಅಂಶಗಳನ್ನು ತಿಳಿಯದೆ ಮಾತನಾಡುವುದು ಸರಿಯಲ್ಲ ಎಂದರು.

ADVERTISEMENT

ರಾಜ್ಯದಲ್ಲಿ 1,300ಕ್ಕೂ ಹೆಚ್ಚು ಜಾತಿಗಳಿದ್ದು ಕೇವಲ ಮೂರ್ನಾಲ್ಕು ಜಾತಿಗಳ ಜನಸಂಖ್ಯೆಯ ಅಂಕಿ ಅಂಶಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟು ಗೊಂದಲ ಸೃಷ್ಟಿಸಲಾಗಿದೆ. ಸರ್ಕಾರ ಅಧಿಕೃತವಾಗಿ ವರದಿಯನ್ನು ಅಂಗೀಕಾರ ಮಾಡಿದ ನಂತರ ಸತ್ಯ ಹೊರಬರಲಿದೆ ಎಂದರು.

ವರದಿಯಲ್ಲಿ ಹಿಂದುಳಿದ, ಹೆಚ್ಚು ಹಿಂದುಳಿದ ಹಾಗೂ ತೀರಾ ಹಿಂದುಳಿದ ಜಾತಿಗಳನ್ನು ವರ್ಗೀಕರಿಸಲಾಗಿದ್ದು ಕೆಲವು ಜಾತಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.