ADVERTISEMENT

ಉಡುಪಿ: 70,971 ಮನೆಗಳ ಸಮೀಕ್ಷೆ ಪೂರ್ಣ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2025, 6:57 IST
Last Updated 1 ಅಕ್ಟೋಬರ್ 2025, 6:57 IST
ಸ್ವರೂಪಾ ಟಿ.ಕೆ
ಸ್ವರೂಪಾ ಟಿ.ಕೆ   

ಉಡುಪಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂಗವಾಗಿ ಜಿಲ್ಲೆಯಲ್ಲಿ ಇದುವರೆಗೆ 70,971 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ಸಮೀಕ್ಷಾ ಕಾರ್ಯಕ್ಕಾಗಿ 3,158 ಗಣತಿದಾರರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.ತಿಳಿಸಿದ್ದಾರೆ.

ಉಡುಪಿ ತಾಲ್ಲೂಕಿನಲ್ಲಿ 97,918 ಕುಟುಂಬಗಳಿದ್ದು, 7,497 ಮನೆಗಳ ಸಮೀಕ್ಷೆ ಮಾಡಲಾಗಿದೆ, ಕುಂದಾಪುರ ತಾಲ್ಲೂಕಿನಲ್ಲಿ 65,791 ಕುಟುಂಬಗಳಿದ್ದು, 15,341 ಮನೆಗಳ ಸಮೀಕ್ಷೆ ಹಾಗೂ ಕಾರ್ಕಳ ತಾಲ್ಲೂಕಿನಲ್ಲಿ 57,740 ಕುಟುಂಬಗಳಿದ್ದು, 12,612 ಮನೆಗಳ ಸಮೀಕ್ಷೆ ಕಾರ್ಯ ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ತಾಲ್ಲೂಕಿನಲ್ಲಿ 43,834 ಕುಟುಂಬಗಳಿದ್ದು, 6,519 ಮನೆಗಳ ಸಮೀಕ್ಷೆ ನಡೆದಿದ್ದು, ಹೆಬ್ರಿ ತಾಲ್ಲೂಕಿನಲ್ಲಿ 12,939 ಕುಟುಂಬಗಳಿದ್ದು, 4,703 ಮನೆಗಳ ಸಮೀಕ್ಷೆ ನಡೆದಿದೆ. ಬ್ರಹ್ಮಾವರ ತಾಲ್ಲೂಕಿನಲ್ಲಿ 51,139 ಕುಟುಂಬಗಳಿದ್ದು, 15,513 ಮನೆಗಳ ಸಮೀಕ್ಷೆ ಹಾಗೂ ಬೈಂದೂರು ತಾಲ್ಲೂಕಿನಲ್ಲಿ 26,410 ಕುಟುಂಬಗಳಿದ್ದು, 8,786 ಮನೆಗಳ ಸಮೀಕ್ಷೆ ಕಾರ್ಯ ನಡೆದಿದೆ ಎಂದು ಹೇಳಿದ್ದಾರೆ.

ADVERTISEMENT

ಯಡಮೊಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಯೋಜನೆಗೊಂಡಿದ್ದ ಮಲ್ಲೇಶ್ ಅವರು ತಮಗೆ ವಹಿಸಿದ್ದ ಸಮೀಕ್ಷಾ ಕಾರ್ಯವನ್ನು ಕೇವಲ ಮೂರು ದಿನಗಳ ಒಳಗಾಗಿ ಪೂರ್ಣಗೊಳಿಸಿದ್ದು, ಅವರಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಭಿನಂದನೆ ಸಲ್ಲಿಸಿದ್ದಾರೆ.

ಸಮೀಕ್ಷೆ ಕಾರ್ಯವನ್ನು ನಾಗರಿಕರು ತಾವೇ ನೇರವಾಗಿ ಅಥವಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಏರ್ಪಡಿಸುವ ಶಿಬಿರದಲ್ಲಿ ಭಾಗವಹಿಸುವ ಮೂಲಕ https://kscbcselfdeclaration.karnataka.gov.in ನಲ್ಲಿ ಲಾಗಿನ್ ಆಗಿ ಸಮೀಕ್ಷಾ ಕಾರ್ಯದಲ್ಲಿ ದಾಖಲು ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.