ಸಚಿವ ಕೃಷ್ಣ ಬೈರೇಗೌಡ
ಉಡುಪಿ: ‘ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್‌ಬಿಐನ ಅಧೀನದಲ್ಲಿ ಬರುತ್ತಿದ್ದು, ಅವುಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಎಚ್ಚರ ತಪ್ಪಿದೆ. ಈ ಕಾರಣಕ್ಕೆ ತಪ್ಪು ಕೆಲಸದ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ’ ಎಂದರು.
ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್‌ಬಿಐ ನಿಯಮ ಉಲ್ಲಂಘಿಸುತ್ತಿವೆ. ಕಂಪನಿಗಳ ಪ್ರತಿನಿಧಿಗಳನ್ನು ಕರೆದು ಶಿಸ್ತು ಕ್ರಮದ ಸೂಚನೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ. ನಿಯಮ ಉಲ್ಲಂಘನೆ ಮಾಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ಅವರು ಎಚ್ಚರಿಕೆ ನೀಡಿರುವುದಾಗಿ ಕೃಷ್ಣ ಬೈರೇಗೌಡ ತಿಳಿಸಿದರು.
ಜಾತಿ ಗಣತಿ ವರದಿ ಬಹಿರಂಗ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಜಾತಿ ಗಣತಿ ವರದಿ ಜಾರಿಗೆ ಬರಬೇಕು ಎನ್ನುವುದು ಅನೇಕರ ಆಶಯವಾಗಿದೆ. ಕಾಂಗ್ರೆಸ್ ಕೂಡ ವರದಿ ಬಹಿರಂಗ ಮಾಡುವ ಆಶಯ ಹೊಂದಿದೆ. ಇಂಥ ಕೆಲಸ ಎಲ್ಲರ ಸಹಮತದಿಂದ ಆಗಬೇಕು ಎಂದರು.
ಸಮಾಜವನ್ನು ಒಂದುಗೂಡಿಸುವ ಪ್ರಯತ್ನದಲ್ಲಿ ಸಮಾಜ ಒಡೆಯಬಾರದು. ಒಮ್ಮತ ಮೂಡಿಸುವ ಪ್ರಯತ್ನ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆಗುತ್ತಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.