ADVERTISEMENT

‘ನೆರೆ ನಷ್ಟ ವರದಿ ತಿರಸ್ಕರಿಸಿಲ್ಲ; ಹೆಚ್ಚುವರಿ ಮಾಹಿತಿ ಕೇಳಿದೆ’

ಸಚಿವ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2019, 14:56 IST
Last Updated 4 ಅಕ್ಟೋಬರ್ 2019, 14:56 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಉಡುಪಿ: ರಾಜ್ಯ ಸರ್ಕಾರ ಸಲ್ಲಿಸಿದ್ದ ನೆರ ನಷ್ಟದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ಹೆಚ್ಚುವರಿ ಮಾಹಿತಿ ಕೇಳಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಗತ್ಯ ಮಾಹಿತಿ ಕೇಳಿದೆ ಎಂದರೆ ಹಣ ಕೊಡಲು ನಿರ್ಧಾರ ಮಾಡಿದೆ ಎಂದರ್ಥ ಎಂದು ಕೋಟ ಸಮಜಾಯಿಷಿ ನೀಡಿದರು.

ರಾಜ್ಯದಲ್ಲಿ ನೆರೆಯಿಂದಅಪಾರ ಪ್ರಮಾಣದ ಮನೆಗಳಿಗೆ ಹಾನಿಯಾಗಿದೆ. ಭಾಗಶಃ ಹಾನಿಗೊಳಗಾದ ಮನೆಗಳಲ್ಲಿ ವಾಸ ಮಾಡಲು ಸಾಧ್ಯವಿಲ್ಲದತಂಹ ಪರಿಸ್ಥಿತಿ ಇದೆ. ಹಾಗಾಗಿ, ನಷ್ಟದ ನಿಖರ ಅಂಕಿ ಅಂಶಗಳ ಮಾಹಿತಿಯನ್ನು ಕೇಂದ್ರ ಕೇಳಿರಬಹುದು. ಮೂರ್ನಾಲ್ಕು ದಿನಗಳಲ್ಲಿ ಗರಿಷ್ಠ ಮೊತ್ತದ ಪರಿಹಾರ ಬಿಡುಗಡೆಯಾಗುವ ವಿಶ್ವಾಸವಿದೆ ಎಂದರು.

ADVERTISEMENT

ದೊಡ್ಡ ದುರಂತಗಳು ನಡೆದಾಗ ಪರಿಹಾರ ಕಾರ್ಯಕ್ಕೆ ಹೆಚ್ಚು ಹಣ ಬೇಕಾಗುತ್ತದೆ. ಇದರರ್ಥಹಣಕಾಸಿನ ಕೊರತೆ ಇದೆ ಎಂದಲ್ಲ. ರಾಜ್ಯದ ಖಜಾನೆಯಲ್ಲಿ ಹಣ ಇದೆ ಎಂದು ಸಚಿವರು ಹೇಳಿದರು.

ವಿರೋಧ ಪಕ್ಷದಲ್ಲಿರುವುದರಿಂದ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸುತ್ತಾರೆ. ಅವರ ಅಭಿಪ್ರಾಯಗಳನ್ನು ಗೌರವಿಸುತ್ತೇವೆ. ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಅವರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿಕೊಳ್ಳಲಿ ಎಂದು ಕೋಟ ವ್ಯಂಗ್ಯವಾಡಿದರು.

ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಟೀಕೆ ಕುರಿತು ಪ್ರತಿಕ್ರಿಯಿಸಿ, ಎಚ್ಚರಿಕೆ ನೀಡಲುನಮ್ಮವರೇ ನಮ್ಮನ್ನು ಗದರುತ್ತಾರೆ.ಸೂಲಿಬೆಲೆ ಮುನಿಸಿಕೊಂಡಿದ್ದಾರೆ, ಕೋಪಗೊಂಡಿಲ್ಲ. ಸಮಸ್ಯೆಗಳನ್ನು ಸರಿಪಡಿಸಿಕೊಂಡು ಹೋಗುತ್ತೇವೆ ಎಂದರು.

ಸದಾನಂದ ಗೌಡ ಅವರ ದೇಶದ್ರೋಹಿ ಪದ ಬಳಕೆ ಕುರಿತು ಮಾತನಾಡಿ,ತಪ್ಪಾಗಿದ್ದರೆ ಸರಿಮಾಡಿಕೊಳ್ಳುತ್ತೇವೆ. ಪಕ್ಷಕ್ಕಾಗಿ ದುಡಿದವರುಅಭಿವೃದ್ಧಿ ವಿಚಾರಚಾಗಿ ಮಾತನಾಡಿದ್ದಾರೆ. ಅವರನ್ನು ಸಮಾಧಾನ ಮಾಡುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.