ಉಡುಪಿ: ಮಣಿಪಾಲ ಪರಿಸರದಲ್ಲಿ ಈಚೆಗೆ ಚಿರತೆ ಭೀತಿ ಹೆಚ್ಚಾಗಿದ್ದು, ಸಾರ್ವಜನಿಕರು ಆತಂಕದಲ್ಲಿ ಬದುಕುವಂತಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಗಣೇಶ್‌ರಾಜ್ ಸರಳೆಬೆಟ್ಟು ತಿಳಿಸಿದ್ದಾರೆ.
ಮಣಿಪಾಲ ಹೆರ್ಗ ಗ್ರಾಮದ ಶೆಟ್ಟಿಬೆಟ್ಟು ಪರಿಸರದಲ್ಲಿರುವ ಬೊಬ್ಬರ್ಯ ದೈವಸ್ಥಾನ ಸ್ಥಾನಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಚಿರತೆ ನಾಯಿಯನ್ನು ಹೊತ್ತೊಯ್ದಿದೆ. ಇಂದಿರಾ ಆಚಾರ್ಯ ಅವರ ಮನೆಯಲ್ಲಿ ಸಾಕಿದ್ದ ನಾಯಿಯನ್ನು ತಿಂದು, ರುಂಡವನ್ನು ಮಾತ್ರ ಬಿಟ್ಟುಹೋಗಿದೆ. ಈ ಭಾಗದಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿದ್ದು, ನಾಗರಿಕರು ಆತಂದಲ್ಲಿದ್ದಾರೆ. ಸಂಬಂಧಪಟ್ಟ ಇಲಾಖೆ ಚಿರತೆಯನ್ನು ಹಿಡಿಯಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.