ADVERTISEMENT

ರಶ್ಮಿ ಶೆಟ್ಟಿ ಸ್ಮಾರಕ ಚೆಸ್ ಟೂರ್ನಿ: ₹ 2 ಲಕ್ಷ ಬಹುಮಾನ ಮೊತ್ತ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2022, 4:17 IST
Last Updated 15 ಅಕ್ಟೋಬರ್ 2022, 4:17 IST
ಬ್ರಹ್ಮಾವರ ಸರ್ಕಾರಿ ಪಿಯು ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳಿಂದ ಕೋಡಿಯ ಕಡಲತಡಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಬ್ರಹ್ಮಾವರ ಸರ್ಕಾರಿ ಪಿಯು ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳಿಂದ ಕೋಡಿಯ ಕಡಲತಡಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.   

ಕುಂದಾಪುರ: ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿರುವ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ರ್‍ಯಾಪಿಡ್ ಚೆಸ್ ಟೂರ್ನಿಯ ಎರಡನೇ ಆವೃತ್ತಿಯಲ್ಲಿ ಒಟ್ಟು ₹ 2 ಲಕ್ಷ ಮೊತ್ತದ ಬಹುಮಾನ ನೀಡಲಾಗುವುದು ಎಂದು ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ತಿಳಿಸಿದ್ದಾರೆ.

ಟೂರ್ನಿ ಅ 15 ಹಾಗೂ 16ರಂದುಇಲ್ಲಿನ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಲಿದ್ದು 300ಕ್ಕೂ ಅಧಿಕ ಆಟಗಾರರು ಸ್ಪರ್ಧಿಸಲಿದ್ದು ವಿವಿಧ ವಿಭಾಗಗಳಲ್ಲಿ ಒಟ್ಟು 165 ಟ್ರೋಫಿಗಳನ್ನು ನೀಡಲಾಗುವುದು. 15ರಂದು ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭದಲ್ಲಿ ಡಿವೈಎಸ್‌ಪಿ ಶ್ರೀಕಾಂತ್ ಕೆ, ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಡಿಜಿ ಫ್ಲಿಕ್ ಇನ್ಶುರೆನ್ಸ್ ಕಂಪನಿ ಸಿಇಓ ರಂಜನ್ ರಮೇಶ್ ನಗರಕಟ್ಟೆ, ಸಕ್ಸಸ್ ಅಕಾಡೆಮಿ ಸಂಸ್ಥಾಪಕ ರಂಜನ್ ನಗರಕಟ್ಟೆ, ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್.ಎಸ್.ಪೂಜಾರಿ, ಪುರಸಭೆಯ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ ಹಾಗೂ ಉಡುಪಿ ಚೆಸ್ ಸಂಸ್ಥೆಯ ಅಧ್ಯಕ್ಷ ಅಮಿತ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

16ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಇನ್‌ಸ್ಪೆಕ್ಟರ್ ಗೋಪಿಕೃಷ್ಣ, ಉದ್ಯಮಿಗಳಾದ ರಂಜನ್ ರಮೇಶ್ ನಗರಕಟ್ಟೆ, ರಂಜನ್ ನಗರಕಟ್ಟೆ, ತಾಲ್ಲೂಕು ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಅಶೋಕ್ ಬೀಜಾಡಿ, ಪುರಸಭೆಯ ಮಾಜಿ ಅಧ್ಯಕ್ಷ ಮೋಹನದಾಸ್ ಶೆಣೈ, ಉದ್ಯಮಿ ಗಣೇಶ್ ಕಾಮತ್, ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ವಿಜಯ್ ಹೆಗ್ಡೆ, ಉಡುಪಿ ಜಿಲ್ಲಾ ಹೋಮ್ ಗಾರ್ಡ್ ಸೆಕಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ ಹಾಗೂ ಕಲಾಕ್ಷೇತ್ರ ಅಧ್ಯಕ್ಷ ಬಿ ಕಿಶೋರ್ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.