ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2024, 15:36 IST
Last Updated 26 ಸೆಪ್ಟೆಂಬರ್ 2024, 15:36 IST
<div class="paragraphs"><p>ಕೋಟ ಶ್ರೀನಿವಾಸ ಪೂಜಾರಿ</p></div>

ಕೋಟ ಶ್ರೀನಿವಾಸ ಪೂಜಾರಿ

   

ಉಡುಪಿ: ‘ಮುಡಾ ಹಗರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಅಂದು ಯಡಿಯೂರಪ್ಪನವರ ಪ್ರಕರಣದಲ್ಲಿ ಯಾವ ಮಾನದಂಡವನ್ನು ಅನುಸರಿಸಬೇಕೆಂದು ಸಿದ್ದರಾಮಯ್ಯ ಅವರು ಹೇಳಿದ್ದಾರೋ, ಅದೇ ಮಾನದಂಡವನ್ನು ಈ ಪ್ರಕರಣದಲ್ಲೂ ಅನುಸರಿಸಬೇಕು. ಅವರು ತಮ್ಮ ಹೇಳಿಕೆಗೆ ಬದ್ಧರಾಗಬೇಕು. ಪಕ್ಷದ ಅಧ್ಯಕ್ಷರ ಜೊತೆ ನಿಂತು ನಾವು ಹೋರಾಟ ಮುಂದುವರಿಸಲಿದ್ದೇವೆ’ ಎಂದರು.

ADVERTISEMENT

ಸಿಟಿ ಸ್ಕ್ಯಾನ್‌ ಸ್ತಬ್ಧ: 14 ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್‌ಗಳು ಸ್ತಬ್ಧವಾಗಿವೆ. ಸರ್ಕಾರಿ ಆಸ್ಪತ್ರೆಗಳು ಜನರಿಗೆ ಚಿಕಿತ್ಸೆ ನೀಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.

ವೇಗ ಪಡೆದ ಕಾಮಗಾರಿ: ಕಲ್ಯಾಣಪುರ–ಸಂತೆಕಟ್ಟೆ ಅಂಡರ್‌ಪಾಸ್ ಕಾಮಗಾರಿಗೆ ಸಂಬಂಧಿಸಿ ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದೇನೆ. ಕಾಮಗಾರಿ ಈಗ ಮೊದಲಿಗಿಂತ 16 ಪಟ್ಟು ವೇಗ ಪಡೆದುಕೊಂಡಿದೆ ಎಂದು ಕೋಟ ಹೇಳಿದರು.

ಅನುಮತಿ ಇರಲಿಲ್ಲ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ರೈಲ್ವೆ ಇಲಾಖೆಯ ಅನುಮತಿ ಪಡೆದಿರಲಿಲ್ಲ. ಎರಡು ತಿಂಗಳ ಹಿಂದೆ ನಾನು ಅನುಮತಿ ಕೊಡಿಸಿದ್ದೇನೆ. ಈಗ ಕಾಮಗಾರಿಗೆ ಬೇಕಾದ ಸಾಮಗ್ರಿ ಬಂದಿವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.