ADVERTISEMENT

ಕೆಎಂಸಿಯಲ್ಲಿ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 13:39 IST
Last Updated 12 ಅಕ್ಟೋಬರ್ 2021, 13:39 IST
ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣುಮಗುವಿಗೆ ಉಡುಗೊರೆ ಕೊಟ್ಟು ಗೌರವಿಸಿದರು.
ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣುಮಗುವಿಗೆ ಉಡುಗೊರೆ ಕೊಟ್ಟು ಗೌರವಿಸಿದರು.   

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಸೋಮವಾರ ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಿತು. ಆಸ್ಪತ್ರೆಯಲ್ಲಿ ಅ.11 ರಂದು ಜನಿಸಿದ ನವಜಾತ ಹೆಣ್ಣು ಶಿಶುಗಳಿಗೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಗೌರವ ನೀಡುವ ಮೂಲಕ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಲಾಯಿತು.

ಬಳಿಕ ಮಾತನಾಡಿದ ಅವರು, ಹೆಣ್ಣುಮಗುವಿಗೆ ಸರಿಯಾದ ಶಿಕ್ಷಣ, ಆರೋಗ್ಯ, ಶಿಕ್ಷಣ ಹಾಗೂ ಸಮಾನ ಹಕ್ಕು ಹಾಗೂ ಅವಕಾಶಗಳನ್ನು ನೀಡುವುದು ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಮುಖ್ಯ ಉದ್ದೇಶ ಎಂದರು.

ಲಿಂಗ ತಾರತಮ್ಯ, ಹಿಂಸೆಯಿಂದ ಮಹಿಳೆಯರಿಗೆ ರಕ್ಷಣೆ ನೀಡುವುದು ಆದ್ಯ ಕರ್ತವ್ಯವಾಗಬೇಕು. ಹೆಣ್ಣು ಪ್ರಪಂಚದ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುತ್ತಿದ್ದು, ಅಭಿವೃದ್ಧಿಯ ವೇಗಕ್ಕೆ ಶಕ್ತಿಯಾಗಿದ್ದಾಳೆ ಎಂದು ಅಭಿಪ್ರಾಯಪಟ್ಟರು.

ADVERTISEMENT

ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಈ ವರ್ಷದ ಘೋಷವಾಕ್ಯ ‘ಡಿಜಿಟಲ್ ಪೀಳಿಗೆ; ನಮ್ಮ ಪೀಳಿಗೆ’ಯಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.