ಸಾಂದರ್ಭಿಕ ಚಿತ್ರ
ಉಡುಪಿ: ಜಿಲ್ಲೆಯ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಒಂದು ವರ್ಷ ಪ್ರಾಯದ ಹೆಣ್ಣು ಮಗು ಮೃತಪಟ್ಟಿದೆ.
ಪುತ್ತೂರು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಅಯ್ಯಪ್ಪ ಎಂಬುವವರು ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಅವರ ಪತ್ನಿ ಬುಧವಾರ ಬೆಳಿಗ್ಗೆ ಮಗುವನ್ನು ಜೋಳಿಗೆಯಲ್ಲಿ ಮಲಗಿಸಿ ಕೆಲಸಕ್ಕೆಂದು ಹೊರಗೆ ಹೋಗಿದ್ದರು ಎನ್ನಲಾಗಿದೆ.
ವಾಪಸ್ ಬಂದಾಗ ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಮಗು ನೇತಾಡುತ್ತಿದ್ದ ಸ್ಥಿತಿಯಲ್ಲಿ ಕಂಡು ಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಮಗು ಮೃತಪಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.