ADVERTISEMENT

ಉಡುಪಿ ಜಿಲ್ಲಾ ಮಕ್ಕಳ ಸಾಹಿತ್ಯ ಸಂಭ್ರಮ ನಾಳೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 5:06 IST
Last Updated 5 ಡಿಸೆಂಬರ್ 2022, 5:06 IST
ಅವನಿ ಉಪಾಧ್ಯ
ಅವನಿ ಉಪಾಧ್ಯ   

ಬ್ರಹ್ಮಾವರ: ಸಾಲಿಗ್ರಾಮದ ಡಾ.ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ, ಕೋಟ ವಿದ್ಯಾಸಂಘದ ಆಶ್ರಯ ದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಸಹಕಾರದಲ್ಲಿ ಉಡುಪಿ ಜಿಲ್ಲಾ ಮಕ್ಕಳ ಸಾಹಿತ್ಯ ಸಂಭ್ರಮ ಇದೇ 6ರಂದು ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ಪೆರ್ವಾಜೆ ಸುಂದರ ಪುರಾಣಿಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅವನಿ ಉಪಾಧ್ಯ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ವಿದ್ಯಾರ್ಥಿ ಪ್ರಮಥ್‌ ಉದ್ಘಾಟಿಸುವರು. ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಡಾ.ನಿ.ಬಿ.ವಿಜಯ ಬಲ್ಲಾಳ್‌, ಕೋಟ ವಿದ್ಯಾ ಸಂಘದ ಕೋಶಾಧಿಕಾರಿ ವೆಲೇರಿಯನ್‌ ಮೆನೇಜಸ್‌, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಜಗದೀಶ ಹೊಳ್ಳ, ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ಕ.ಸಾ.ಪದ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಇರುವರು.

ಮಕ್ಕಳ ಕವಿ ಸಮಯ, ಗಾಯನ ಸಮಯ, ಕಥಾ ಸಮಯ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 3ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬೆಳಗೋಡು ರಮೇಶ ಭಟ್‌ ಸಮಾರೋಪ ಭಾಷಣ ಮಾಡುವರು ಎಂದು ಮಕ್ಕಳ ಸಾಹಿತ್ಯ ವೇದಿಕೆಯ ಪ್ರೊ.ಉಪೇಂದ್ರ ಸೋಮಯಾಜಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.