ADVERTISEMENT

ಉಡುಪಿ: ಕ್ರಿಸ್‌ಮಸ್ ಸ್ನೇಹ ಕೂಟ; ‘ಎಲ್ಲಾ ಸಂಸ್ಕೃತಿಯ ಅರಿವು ಅಗತ್ಯ’

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 7:46 IST
Last Updated 14 ಡಿಸೆಂಬರ್ 2025, 7:46 IST
ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಕ್ರಿಸ್‌ಮಸ್ ಸ್ನೇಹ ಕೂಟ ಕಾರ್ಯಕ್ರಮ ಜರುಗಿತು
ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಕ್ರಿಸ್‌ಮಸ್ ಸ್ನೇಹ ಕೂಟ ಕಾರ್ಯಕ್ರಮ ಜರುಗಿತು   

ಉಡುಪಿ: ಎಲ್ಲಾ ಧರ್ಮಗಳ ಆಚರಣೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿತುಕೊಂಡರೆ ಸಮಾಜದಲ್ಲಿ ಶಾಂತಿಯ ಸಂದೇಶ ಸಾರಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.

ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ನಗರದ ಶೋಕಮಾತಾ ಚರ್ಚಿನ ಸಭಾಂಗಣ ಶನಿವಾರ ಹಮ್ಮಿಕೊಂಡಿದ್ದ ಕ್ರಿಸ್‌ಮಸ್ ಸ್ನೇಹ ಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಏಕತೆಯನ್ನು ಗಟ್ಟಿಗೊಳಿಸುವುದು ವಿಶ್ವದ ಎಲ್ಲಾ ಧರ್ಮಗಳ ಮೂಲ ಉದ್ದೇಶವಾಗಿದೆ. ಸಮಾಜವನ್ನು ಒಗ್ಗೂಡಿಸುವಲ್ಲಿ ಧರ್ಮಕ್ಕೆ ಮಹತ್ವದ ಪಾತ್ರವಿದೆ ಎಂದರು.

ADVERTISEMENT

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಧರ್ಮಪ್ರಾಂತ್ಯದ ವತಿಯಿಂದ ಗೌರವಿಸಲಾಯಿತು. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಜಿ ಕುರ್ಯ ಮಾತನಾಡಿದರು.

ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ಸ್ಟೀವನ್ ಡಿಸೋಜಾ ಭಾಗವಹಿಸಿದ್ದರು. ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ಸ್ವಾಗತಿಸಿದರು. ಮಾಧ್ಯಮ ಸಂಚಾಲಕ ಮೈಕಲ್ ರೊಡ್ರಿಗಸ್ ವಂದಿಸಿದರು. ಲೆಸ್ಲಿ ಆರೋಝಾ ನಿರೂಪಿಸಿದರು.

ಭೂಲೋಕದಲ್ಲಿ ಶಾಂತಿಗಾಗಿ ಶ್ರಮಿಸಿದವರು ಭಾಗ್ಯವಂತರು ಎಂದು ಯೇಸು ಸ್ವಾಮಿ ಸಾರಿದ್ದರು. ಅವರ ಸಂದೇಶದಂತೆ ಬದುಕಿ ಬಾಳೋಣ
– ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.