ಉಡುಪಿ: ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ, ಬಡವರಿಗೆ ಬದುಕಲು ಅವಕಾಶ ಕಲ್ಪಿಸುವ ನೀತಿಗಳನ್ನು ಜಾರಿಗೆ ತರಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿ ಪಡಿಸಬೇಕು. ಎಪಿಎಂಸಿ ವ್ಯವಸ್ಥೆ ಬಲಗೊಳಿಸಬೇಕು. ಗೊಬ್ಬರ ಒಳಗೊಂಡಂತೆ ಕೃಷಿ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡಬೇಕು. ರೈಲ್ವೆ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಎಲ್ಲಾ ಸ್ವರೂಪದ ಖಾಸಗೀಕರಣವನ್ನು ಕೈಬಿಡಬೇಕು. ಸಾರ್ವಜನಿಕ ರಂಗದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್ ಕಾಂಚನ್, ಬ್ರಹ್ಮಾವರ ಸಿಐಟಿಯು ಸಂಚಾಲಕ ರಾಮ ಕಾರ್ಕಡ, ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಉಪಾಧ್ಯಕ್ಷ ಸುಭಾಸ್ ನಾಯಕ್, ಪ್ರಧಾನ ಕಾರ್ಯದರ್ಶಿ ಶಶಿಧರ ಗೊಲ್ಲ, ಸಾಲಿಗ್ರಾಮ ಕಟ್ಟಡ ಸಂಘದ ಮುಖಂಡರಾದ ಮಹಾಬಲ ಪೂಜಾರಿ ಕಾರ್ಕಡ, ಸದಾಶಿವ ಪೂಜಾರಿ, ನಳಿನಿ ಎಸ್., ಲಲಿತ, ಮೋಹನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.