ಉಡುಪಿ: ಗಾಂಧಿ ಜಯಂತಿ ಪ್ರಯುಕ್ತ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಕಥೊಲಿಕ್ ಸಭಾ, ಯುವ ಆಯೋಗ, ಮಹಿಳಾ ಆಯೋಗ ಮತ್ತು ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿಯ ವತಿಯಿಂದ ಶುಕ್ರವಾರ ತೊಟ್ಟಂ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಚರ್ಚ್‌ನ ಧರ್ಮಗುರು ಡೆನಿಸ್ ಡೆಸಾ ಚಾಲನೆ ನೀಡಿ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದರಿಂದ ತೊಟ್ಟಂ ವ್ಯಾಪ್ತಿಯ ಹಲವು ಪ್ರದೇಶಗಳು ಕಸಯುಕ್ತವಾಗಿವೆ. ಈ ಕುರಿತು ಸಾರ್ವಜನಿಕರು ಮೌನವಾಗಿರದೆ ಜನಪ್ರತಿನಿಧಿಗಳನ್ನು ಎಚ್ಚರಿಸುವುದರೊಂದಿಗೆ ಪರಿಸರದ ಸ್ವಚ್ಛತೆ ಕಾಪಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮೆಸ್ಕಾಂ ಮಲ್ಪೆ ಶಾಖೆಯ ಲೈನ್ ಮ್ಯಾನ್‌ಗಳನ್ನು ಗೌರವಿಸಲಾಯಿತು.
ತೊಟ್ಟಂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಚೇರಿಯಿಂದ ಆರಂಭಿಸಿ ಬಡಾನಿಡಿಯೂರು ಶಾಲೆಯ ತನಕ 5 ಗುಂಪುಗಳಲ್ಲಿ ಕಸವನ್ನು ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ಥಳೀಯ ಮುಸ್ಲಿಂ ಮಹಿಳಾ ಸಂಘಟನೆ ಕೈ ಜೋಡಿಸಿತ್ತು.
ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷೆಲೆಸ್ಲಿ ಆರೋಝಾ, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, ಕಥೊಲಿಕ್ ಸಭಾ ಅಧ್ಯಕ್ಷರಾದ ವೀಣಾ ಫೆರ್ನಾಂಡಿಸ್, ಮಹಿಳಾ ಸಂಘಟನೆಯ ಅಧ್ಯಕ್ಷೆ ಪ್ರಿಯಾ ರೊಡ್ರಿಗಸ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.