
ಪ್ರಜಾವಾಣಿ ವಾರ್ತೆ
ಉಡುಪಿ: ಕಾರ್ಕಳ ತಾಲ್ಲೂಕಿನ ಕಾಬೆಟ್ಟುವಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಉದ್ಘಾಟಿಸಿದರು.
ಬಳಿಕ ಕಾರ್ಕಳದ ಕಿಸಾನ್ ಸಭಾ ಟ್ರಸ್ಟ್ ನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ ಕಿಸಾನ್ ಸಭಾ ಸಭಾಂಗಣದ ಲೋಕರ್ಪಣೆಯನ್ನೂ ನೆರವೇರಿಸಿದರು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಮಧು ಬಂಗಾರಪ್ಪ, ಶಾಸಕ ಸುನಿಲ್ ಕುಮಾರ್ ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.