ADVERTISEMENT

‘ಅಂಕಗಳಿಂದ ಸಾಮರ್ಥ್ಯ ಅಳೆಯಬೇಡಿ’

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 6:05 IST
Last Updated 24 ಜುಲೈ 2025, 6:05 IST
ಹಿರಿಯಡಕ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಿತು
ಹಿರಿಯಡಕ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಿತು   

ಉಡುಪಿ: ಶಿಕ್ಷಣ ಅಂದರೆ ಕೇವಲ ಖಾಲಿ ಕೊಡಪಾನಗಳಿಗೆ ನೀರು ತುಂಬಿಸುವ ಕೆಲಸವಲ್ಲ, ಗಳಿಸಿದ ಜ್ಞಾನವನ್ನು ವಾಸ್ತವಿಕ ಬದುಕಿನತ್ತ ತಿರುಗಿಸುವುದೇ ನಿಜವಾದ ಶಿಕ್ಷಣ. ವಿದ್ಯಾರ್ಥಿಗಳ ಸಾಮಥ್ಯ೯ವನ್ನು ಕೇವಲ ಅಂಕಗಳಿಂದ ಅಳೆಯುವುದು ಸರಿಯಲ್ಲ ಬದಲಾಗಿ ಅವರ ಸಮಗ್ರವಾದ ವ್ಯಕ್ತಿತ್ವವನ್ನು ಅಳೆಯುವುದೇ ನಿಜವಾದ ಮೌಲ್ಯಮಾಪನ ಎಂದು ಎಂಜಿಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ಹೇಳಿದರು.

ಹಿರಿಯಡಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪದವಿಪೂರ್ವ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ವಿದ್ಯಾರ್ಥಿದಿಸೆಯಲ್ಲಿಯೇ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸಹಕರಿಸುವುದು ಹೆತ್ತವರ ಮತ್ತು ಶಿಕ್ಷಕರ ಜವಾಬ್ದಾರಿಯೂ ಹೌದು ಎಂದರು.

ADVERTISEMENT

ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಂಚಾಲಕ ಎನ್. ಎಸ್.ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎಲ್.ವಿಶ್ವಾಸ್, ಉದ್ಯಮಿ ದೇವರಾಯ ನಾಯಕ್, ಉಪ ಪ್ರಾಂಶುಪಾಲ ಪ್ರಕಾಶ್ ಪ್ರಭು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶರತ್ ಹಿರಿಯಡಕ ಉಪಸ್ಥಿತರಿದ್ದರು.

ಉಪನ್ಯಾಸಕಿ ವೀಣಾ ನಾಯಕ್ ಪ್ರತಿಜ್ಞಾ ವಿಧಿ ಬೇೂಧಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ತ್ರಿಶಾ ಸ್ವಾಗತಿಸಿದರು. ಉಪನ್ಯಾಸಕ ಮಹೇಶ್ ವಂದಿಸಿದರು. ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ದೇವರಾಯ ಪ್ರಭು ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.