ADVERTISEMENT

ಉಡುಪಿ: ಕಾಲೇಜಿನತ್ತ ಬಾರದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 8:43 IST
Last Updated 17 ನವೆಂಬರ್ 2020, 8:43 IST
ವಿದ್ಯಾರ್ಥಿಗಳಿಗೆ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಯಿತು
ವಿದ್ಯಾರ್ಥಿಗಳಿಗೆ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಯಿತು   

ಉಡುಪಿ: ಕಾಲೇಜು ಪ್ರವೇಶಕ್ಕೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇತ್ತು.

ಕೆಲವೇ ವಿದ್ಯಾರ್ಥಿಗಳು ಮಾತ್ರ ತರಗತಿಗೆ ಹಾಜರಾಗಿದ್ದರು. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳು ಮಾತ್ರ ಬಂದಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಹಾಗೂ ಪೋಷಕರಿಂದ ಒಪ್ಪಿಗೆ ಪತ್ರ ತಂದ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿನೊಳಗೆ ಪ್ರವೇಶ ನೀಡಲಾಗುತ್ತಿದೆ.

ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ನಾಯಕ್ ತಿಳಿಸಿದರು.

ADVERTISEMENT

ಡಾ.ಜಿ.ಶಂಕರ್ ಕಾಲೇಜಿನಲ್ಲೂ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.