
ಬ್ರಹ್ಮಾವರ: ಕಂಪ್ಯೂಟರ್ ಕೌಶಲ ಕರಗತ ಮಾಡಿಕೊಳ್ಳುವುದು ಅಗತ್ಯ. ಹಾಗಾಗಿ ಛಲದಿಂದ ಮುಂದುವರಿಯಿರಿ ಎಂದು ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜಿನ ಉಪನ್ಯಾಸಕ ಭರತ್‌ರಾಜ್ ಹೇಳಿದರು.
ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಶನಿವಾರ ಆರಂಭವಾದ ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಡಾ.ಬೊಮ್ಮಯ್ಯ ಎಂ ಅಧ್ಯಕ್ಷತೆ ವಹಿಸಿ ಟ್ಯಾಲಿ, ಜಿ.ಎಸ್.ಟಿ, ಟೈಪಿಂಗ್ ಮುಂತಾದವು ಅಗತ್ಯದ ವಿಷಯಗಳು. ಹಾಗಾಗಿ ಅಂಜಿಕೆಯಿಲ್ಲದೆ ಆಸಕ್ತಿಯಿಂದ ತರಬೇತಿಯನ್ನು ಪಡೆದು ಸ್ವಉದ್ಯೋಗದಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಧೃಢರಾಗಿ ಎಂದರು.
ತರಬೇತಿಯ ಅತಿಥಿ ಉಪನ್ಯಾಸಕಿ ರಾಜಲಕ್ಷ್ಮಿ ಇದ್ದರು. ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಚೈತ್ರಾ ಕೆ ನಿರೂಪಿಸಿದರು. ಉಪನ್ಯಾಸಕ ಸಂತೋಷ ಶೆಟ್ಟಿ ಸ್ವಾಗತಿಸಿದರು. ಕಚೇರಿ ಸಹಾಯಕ ಶಾಂತಪ್ಪ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.