ADVERTISEMENT

ಆನಗಳ್ಳಿ ಗ್ರಾ.ಪಂ: ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 16:09 IST
Last Updated 19 ಫೆಬ್ರುವರಿ 2021, 16:09 IST
ಕುಂದಾಪುರ ಸಮೀಪದ ಆನಗಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲಾರೆನ್ಸ್ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ಪ್ರಭಾಕರ ಮೊಗವೀರ ಆಯ್ಕೆಯಾಗಿದ್ದಾರೆ
ಕುಂದಾಪುರ ಸಮೀಪದ ಆನಗಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲಾರೆನ್ಸ್ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ಪ್ರಭಾಕರ ಮೊಗವೀರ ಆಯ್ಕೆಯಾಗಿದ್ದಾರೆ   

ಕುಂದಾಪುರ: ಇಲ್ಲಿಗೆ ಸಮೀಪದ ಆನಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಾರೆನ್ಸ್ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಭಾಕರ ಮೊಗವೀರ ಆಯ್ಕೆಯಾಗಿದ್ದಾರೆ.

ಶುಕ್ರವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಾಗಿತ್ತು.

ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೆ ಲಾರೆನ್ಸ್ ಡಿಸೋಜ ಅವಿರೋಧ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಏರ್ಪಟ್ಟು ಬಿಜೆಪಿ ಬೆಂಬಲಿತ ಪ್ರಭಾಕರ ಮೊಗವೀರ ಹಾಗೂ ಪಕ್ಷೇತರ ಮೂಕಾಂಬು ನಾಮಪತ್ರ ಸಲ್ಲಿಸಿದ್ದರು. ಪ್ರಭಾಕರ ಮೊಗವೀರ 6 ಮತ ಪಡೆದರೆ, ಮೂಕಾಂಬು 2 ಮತ ಪಡೆದರು.

ADVERTISEMENT

ಚುನಾವಣಾಧಿಕಾರಿಯಾಗಿ ತೋಟಗಾರಿಕಾ ಅಧಿಕಾರಿ ಸಂಜೀವ ನಾಯ್ಕ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಬಿಜೆಪಿ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಸುನಿಲ್ ಹೇರಿಕುದ್ರು, ಗೋಪಾಲ ಕಳಂಜಿ, ಕಾಂಗ್ರೆಸ್ ಮುಖಂಡರಾದ ಗಂಗಾಧರ ಶೆಟ್ಟಿ , ವಿನೋದ್ ಕ್ರಾಸ್ತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.