ADVERTISEMENT

ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್‌ ದೂರು

Congress

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 17:12 IST
Last Updated 11 ಜುಲೈ 2024, 17:12 IST
ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್‌ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದರು
ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್‌ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದರು   

ಉಡುಪಿ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಸಾರ್ವಜನಿಕವಾಗಿ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಹಾಗೂ ಉಡುಪಿ ನಗರ ಠಾಣೆ ಪಿಎಸ್‌ಐ ಪುನೀತ್ ಅವರಿಗೆ ಗುರುವಾರ ದೂರು ನೀಡಲಾಯಿತು.

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಪ್ರತಿಭಟನೆ ಮಾಡುವ ನೆಪದಲ್ಲಿ, ತನ್ನ ಬಳಿ ಶಸ್ತ್ರಾಸ್ತ್ರಗಳು ಇವೆಯೆಂದೂ ಅದನ್ನು ಉಪಯೋಗಿಸಬೇಕಾಗುತ್ತದೆ ಹಾಗೂ ಯಾರಾದರೂ ಲೋಕಸಭೆಯ ಒಳಗೆ ಹೋಗಿ ರಾಹುಲ್ ಅವರ ಕಪಾಳಕ್ಕೆ ಹೊಡೆಯಬೇಕೆಂದು ಶಾಸಕರು ಕರೆ ಕೊಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭರತ್ ಶೆಟ್ಟಿ ಹೇಳಿಕೆಗೆ ಬೆಂಬಲ ನೀಡಿ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ವಿರುದ್ಧವೂ ಕ್ರಿಮಿನಲ್ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲು ಕೋರಲಾಗಿದೆ.

ADVERTISEMENT

ಪಕ್ಷದ ಮುಖಂಡರಾದ ಮೀನಾಕ್ಷಿ ಮಾಧವ ಬನ್ನಂಜೆ, ಜ್ಯೋತಿ ಹೆಬ್ಬಾರ್, ಗಣೇಶ್ ನೆರ್ಗಿ, ಸುರೇಶ್ ಶೆಟ್ಟಿ ಬನ್ನಂಜೆ, ಸುರೇಂದ್ರ ಆಚಾರ್ಯ, ಅನಂತ್ ನಾಯ್ಕ್, ಕೃಷ್ಣ ಹೆಬ್ಬಾರ್, ಶರತ್ ಶೆಟ್ಟಿ, ಸುಕನ್ಯಾ ಪೂಜಾರಿ, ಸತೀಶ್ ಕೊಡವೂರು, ಸತೀಶ್ ಕುಮಾರ್ ಮಂಚಿ, ಸಾಯಿರಾಜ್ ಕಿದಿಯೂರು, ಸಂಜಯ್ ಆಚಾರ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.