ADVERTISEMENT

ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 2:25 IST
Last Updated 23 ಜೂನ್ 2022, 2:25 IST
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಾವರ ತಾಲ್ಲೂಕು ಕಚೇರಿಯ ಬಳಿ ಬುಧವಾರ ಬಿ.ಜೆ.ಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಾವರ ತಾಲ್ಲೂಕು ಕಚೇರಿಯ ಬಳಿ ಬುಧವಾರ ಬಿ.ಜೆ.ಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು   

ಬ್ರಹ್ಮಾವರ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧ ಸುಳ್ಳು ಕೇಸ್‌ ದಾಖಲಿಸುವ ಮುಖಾಂತರ ಜಾರಿ ನಿರ್ದೇಶನಾಲಯ ಸಂಸ್ಥೆಯ ದುರ್ಬಳಕೆ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಾವರ ತಾಲ್ಲೂಕು ಕಚೇರಿಯ ಬಳಿ ಪ್ರತಿಭಟನೆ ನಡೆಸಲಾಯಿತು.

ಬ್ರಹ್ಮಾವರ ಬ್ಲಾಕ್ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಹಿರಿಯ ನಾಯಕರಾದ ಭುಜಂಗ ಶೆಟ್ಟಿ, ರಮೇಶ್ ಶೆಟ್ಟಿ ಹಾವಂಜೆ, ಡಾ.ಸುನೀತಾ ಶೆಟ್ಟಿ, ಮೈರ್ಮಾಡಿ ಸುಧಾಕರ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ,
ಉಡುಪಿ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ನಾಗೇಶ್ ಉದ್ಯಾವರ, ಕೀರ್ತಿ ಶೆಟ್ಟಿ ಅಂಬಲಪಾಡಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತಾನಾಡಿದರು.

ಈ ಸಂದರ್ಭ ಘಟಕಗಳ ಅಧ್ಯಕ್ಷರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.