ಬ್ರಹ್ಮಾವರ: ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಕೋಟತಟ್ಟು ಗ್ರಾಮ ಪಂಚಾಯಿತಿ ಎದುರು ಬಿಜೆಪಿ ವಿರುದ್ಧ ಕಾಂಗ್ರೆಸ್ ‘ಸತ್ಯದರ್ಶನ’ ಪ್ರತಿಭಟನೆ ನಡೆಯಿತು.
ಮುಖಂಡ ಜಯಪ್ರಕಾಶ ಹೆಗ್ಡೆ ಮಾತನಾಡಿ, ಬಿಜೆಪಿಯವರು ಸುಳ್ಳಿನ ರಾಜಕಾರಣ ಮಾಡುತ್ತಿದ್ದು, ಜನರ ದಿಕ್ಕು ತಪ್ಪಿಸುವ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು. ಬಿಜೆಪಿ ಈಚೆಗೆ ನಡೆಸಿದ ಪ್ರತಿಭಟನೆ ಬಗ್ಗೆ ವಿವರಣೆ ನೀಡಿ, ಗ್ಯಾರಂಟಿ ಯೋಜನೆಗಳು, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಗಳಲ್ಲಿ ಜಾರಿಗೆ ತಂದ ಯೋಜನೆಗಳನ್ನು ಜನರಿಗೆ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಎ. ಕುಂದರ್, ಕೋಟ ವ್ಯವಸಾಯಕ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ, ಗ್ರಾಮೀಣ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯಿತಿ ಸದಸ್ಯರಾದ ಸಾಯಿರಬಾನು, ರೋಬರ್ಟ್ ಡಿಸೋಜ, ಮುಖಂಡರಾದ ರವಿ ಪೂಜಾರಿ, ರತ್ನಾಕರ ಶ್ರೀಯಾನ್, ವಿವಿಧ ಘಟಕದ ಅಧ್ಯಕ್ಷರು, ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ, ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಅಚ್ಯುತ ಪೂಜಾರಿ, ಗ್ರಾಮೀಣ ಸಮಿತಿ ಅಧ್ಯಕ್ಷ ಚಂದ್ರ ಆಚಾರ್, ಇಂಟಕ್ ಅಧ್ಯಕ್ಷ ದೇವೇಂದ್ರ ಗಾಣಿಗ, ಸತೀಶ ಕುಂದರ್, ಅಶೋಕ ಶೆಟ್ಟಿ, ಗಣೇಶ ಪೂಜಾರಿ, ಹಿಂದುಳಿದ ವರ್ಗಗಳ ಅಧ್ಯಕ್ಷ ದಿನೇಶ ಬಂಗೇರ, ಅಮೃತೇಶ್ವರಿ ವ್ಯವಸ್ಥಾಪನ ಸಮಿತಿ ಸದಸ್ಯ ಗಣೇಶ ನೆಲ್ಲಿಬೆಟ್ಟು, ಶಿವ ಪೂಜಾರಿ, ಕಾರ್ಮಿಕ ಘಟಕದ ಅಧ್ಯಕ್ಷ ರವಿ ಪೂಜಾರಿ, ದೇವದಾಸ ಕಾಂಚನ್, ಮಹಾಬಲ ಮಡಿವಾಳ, ಭಾಸ್ಕರ ಶೆಟ್ಟಿ ಭಾಗವಹಿಸಿದ್ದರು. ಕೋಟ ಗ್ರಾ.ಪಂ. ಮುಂಭಾಗದಲ್ಲಿಯೂ ಪ್ರತಿಭಟನೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.