ADVERTISEMENT

ಅಶಕ್ತರಿಗೆ ನೆರವಾಗುವುದೇ ಕಾಂಗ್ರೆಸ್ ಧ್ಯೇಯ: ಐವನ್ ಡಿಸೋಜ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 5:39 IST
Last Updated 27 ಅಕ್ಟೋಬರ್ 2025, 5:39 IST
ಉಡುಪಿ ಪುರಭವನದಲ್ಲಿ ಭಾನುವಾರ ರಕ್ತದಾನ ಶಿಬಿರ ಜರುಗಿತು
ಉಡುಪಿ ಪುರಭವನದಲ್ಲಿ ಭಾನುವಾರ ರಕ್ತದಾನ ಶಿಬಿರ ಜರುಗಿತು   

ಉಡುಪಿ: ಅಶಕ್ತರಿಗೆ  ನೆರವು ನೀಡುವುದೇ ಕಾಂಗ್ರೆಸ್ ಪಕ್ಷದ ಮೂಲ ಧ್ಯೇಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಉಡುಪಿ ಪುರಭವನದಲ್ಲಿ ಭಾನುವಾರ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವವನ್ನು ಉಳಿಸುವ ಪುಣ್ಯದ ಕಾರ್ಯವಾಗಿದೆ ಎಂದರು.

ADVERTISEMENT

ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಬೀಜ ಮತ್ತು ಸಾವಯವ ಪ್ರಾಮಾಣೀಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ದಾಸ್, ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು.

ಆಯ್ದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ರಕ್ತದಾನ ಶಿಬಿರದಲ್ಲಿ 238 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ವಹಿಸಿದ್ದರು.

ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ರಮೇಶ್ ಕಾಂಚನ್, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಪಿ. ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ ಉಪಸ್ಥಿತರಿದ್ದರು.

Highlights - 238 ಯೂನಿಟ್ ರಕ್ತ ಸಂಗ್ರಹ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.