ADVERTISEMENT

ಉಡುಪಿ | ‘ಪಕ್ಷದ ಮೇಲಿನ ಜನರ ವಿಶ್ವಾಸ ಉಳಿಸಿ’

ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅಶೋಕ ಕುಮಾರ್ ಪ್ರತಿಪಾದನೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 14:46 IST
Last Updated 22 ಜೂನ್ 2025, 14:46 IST
ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ ಜರುಗಿತು
ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ ಜರುಗಿತು   

ಉಡುಪಿ: ಮುಂಬರುವ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿರುವುದರಿಂದ ಜನತೆಗೆ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ, ವಿಶ್ವಾಸ ಬಂದಿದೆ. ಅದನ್ನು ಉಳಿಸಿ, ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದರು.

ADVERTISEMENT

ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಮಾತು ಕಡಿಮೆ ಕೆಲಸ ಜಾಸ್ತಿ ಆಗಬೇಕು. ಬಿಜೆಪಿ ಅವಧಿಯಲ್ಲಿ 9/11 ಕಾನೂನು ಜಾರಿಯಾಗಿದ್ದು, ಇದೀಗ ಅವರು ಕಾಂಗ್ರೆಸ್ ಮೇಲೆ ಹೊರಿಸಲು ನೋಡುತ್ತಿದ್ದಾರೆ. ಅದನ್ನು ನಾವು ಜನರಿಗೆ ಮನವರಿಕೆ ಮಾಡಬೇಕು. ಆಕ್ರಮ ಸಕ್ರಮ, ಡೀಮ್ಡ್ ಫಾರೆಸ್ಟ್, ಕುಮ್ಕಿ ಜಾಗ, ಸಿಂಗಲ್ ಸೈಟ್ ಲೇಔಟ್ ಬಗ್ಗೆ ಸಮಸ್ಯೆ ಪರಿಹರಿಸಲು ಕಂದಾಯ ಸಚಿವರನ್ನು ಜಿಲ್ಲೆಗೆ ಕರೆಸಿ ಸಮಾಲೋಚನೆ ಮಾಡುವುದು ಉತ್ತಮ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು, ಪ್ರಸಾದ್‍ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ, ಭುಜಂಗ ಶೆಟ್ಟಿ ಮಾತನಾಡಿದರು.

ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಿವರಾಮ ಶೆಟ್ಟಿ ಮಲ್ಯಾಡಿ, ದಿನೇಶ್ ಪುತ್ರನ್, ವೆರೋನಿಕಾ ಕರ್ನೇಲಿಯೊ, ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ರಾಘವೆಂದ್ರ ಶೆಟ್ಟಿ, ಗೋಪಿನಾಥ್ ಭಟ್, ವೈ.ಸುಕುಮಾರ್, ಶುಭದ ರಾವ್, ಹರಿಪ್ರಸಾದ್ ಶೆಟ್ಟಿ, ದಿನಕರ ಹೇರೂರು, ಹರಿಪ್ರಸಾದ್ ರೈ, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಯತೀಶ್ ಕರ್ಕೇರ, ಕೃಷ್ಣ ಶೆಟ್ಟಿ ಬಜಗೋಳಿ, ಗೀತಾ ವಾಗ್ಲೆ, ಜ್ಯೋತಿ ಹೆಬ್ಬಾರ್ ಭಾಗವಹಿಸಿದ್ದರು.

ಜಿಲ್ಲಾ ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಕೆ.ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.