ADVERTISEMENT

ಉಡುಪಿ | ಪ್ರತಿಯೊಬ್ಬರೂ ಪ್ರಜ್ಞಾವಂತಿಕೆ ಬೆಳೆಸಿಕೊಳ್ಳಿ: ವಾಸು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 7:29 IST
Last Updated 1 ಡಿಸೆಂಬರ್ 2025, 7:29 IST
ಸಂವಿಧಾನ ದಿನಾಚರಣೆ ಕಾರ್ಯಕ್ರಮ ಜರುಗಿತು
ಸಂವಿಧಾನ ದಿನಾಚರಣೆ ಕಾರ್ಯಕ್ರಮ ಜರುಗಿತು   

ಉಡುಪಿ: ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎದುರಾಗುವ ಅಪಾಯಗಳನ್ನು ಎದುರಿಸುವ ಪ್ರಜ್ಞಾವಂತಿಕೆಯನ್ನು ಪ್ರಜೆಗಳು ಬೆಳೆಸಿಕೊಂಡಾಗ ಮಾತ್ರ ಸಂವಿಧಾನದ ಆಶಯಗಳು ಸಾಕಾರಗೊಳ್ಳಲು ಸಾಧ್ಯ ಎಂದು ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಾಸು ಮೊಗೇರ್ ಹೇಳಿದರು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐಕ್ಯೂ ಎಸಿ, ರಾಜಕೀಯ ಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಜಂಟಿ ಆಶ್ರಯದಲ್ಲಿ ಈಚೆಗೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಮಾತನಾಡಿ, ಸಂವಿಧಾನ ಸಾರುವ ಮೌಲ್ಯಗಳೆಲ್ಲವೂ ಮಾನವೀಯ ಮೌಲ್ಯಗಳಾಗಿರುವುದರಿಂದ ಅದು ನಮ್ಮ ಬದುಕಿನ ಮೌಲ್ಯಗಳು, ಅದನ್ನು ಗೌರವಿಸುವುದು ನಮ್ಮ ಜವಾಬ್ದಾರಿ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಶಾಂತ್ ನೀಲಾವರ ಮಾತನಾಡಿದರು.

ADVERTISEMENT

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಜ್ ಕುಮಾರ್, ಸಂದೇಶ್, ಐಕ್ಯೂಎಸಿ ಸಂಚಾಲಕ ವಿಷ್ಣುಮೂರ್ತಿ ಪ್ರಭು, ರಾಜ್ಯಶಾಸ್ತ್ರ ಉಪನ್ಯಾಸಕ ಆರತಿ ಜಿ., ಕೃಷ್ಣ ಸಾಸ್ತಾನ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.