ADVERTISEMENT

ಜಮೀ‌ರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ: ಟಿ.ಜೆ. ಅಬ್ರಹಾಂ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2024, 14:24 IST
Last Updated 26 ಸೆಪ್ಟೆಂಬರ್ 2024, 14:24 IST
ಟಿ.ಜೆ. ಅಬ್ರಹಾಂ
ಟಿ.ಜೆ. ಅಬ್ರಹಾಂ   

ಉಡುಪಿ: ‘ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೈಕೋರ್ಟ್ ತೀರ್ಪನ್ನು ‘ರಾಜಕೀಯ ಆದೇಶ’ ಎಂದು ಹೇಳಿರುವುದು ಸರಿಯಲ್ಲ. ಅವರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುತ್ತೇನೆ’ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹೈಕೋರ್ಟ್ ತೀರ್ಪು ಬಗ್ಗೆ ಮಾತನಾಡುವುದು ಅಂದರೆ ಹುಡುಗಾಟನಾ. ರಾಜಕಾರಣದಲ್ಲಿ ಭಾಷಣ ಮಾಡಿದ ಹಾಗೆ ಮಾತನಾಡಿದರೆ ಆಗುತ್ತಾ. ನ್ಯಾಯಾಲಯದ ಬಗ್ಗೆ ಭಯ, ಭಕ್ತಿ ಬೇಡವಾ? ಯಾರ ಬಗ್ಗೆ ಮಾತನಾಡುತ್ತಿದ್ದೀರಿ ಗೊತ್ತಿದೆಯಾ?‘ ಎಂದರು.

‘ಜಮೀರ್ ಅವರು ಸಾರಿಗೆ ಸಿಬ್ಬಂದಿ ಹತ್ತಿರ ಮಾತನಾಡಿದ ಹಾಗೆ ಮಾತನಾಡಿದ್ದಾರೆ. ನನ್ನ ಬಗ್ಗೆ ಮಾತನಾಡಲಿ ಪರವಾಗಿಲ್ಲ. ನ್ಯಾಯಾಲಯದ ಬಗ್ಗೆ ಈ ರೀತಿ ಮಾತನಾಡಬಾರದು’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.