ಉಡುಪಿ: ಕಾರ್ಕಳ ತಾಲ್ಲೂಕಿನ ಕುಕುಂದೂರಿನ ನಕ್ರೆ ಆನಂದಿ ಮೈದಾನದ ಬಳಿ ಮತಾಂತರ ಮಾಡಲಾಗುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ದಾಳಿ ನಡೆಸಿದ್ದಾರೆ.
ಕೊಠಡಿಯೊಂದರಲ್ಲಿಸಾಮೂಹಿಕವಾಗಿಪ್ರಾರ್ಥನೆನಡೆಯುತ್ತಿದ್ದಾಗದಿಢೀರ್ ದಾಳಿ ನಡೆದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಪ್ರಾರ್ಥನಾ ನಿರತರಹಲ್ಲೆ ನಡೆಸಲಾಗಿದೆ ಎಂದು ಬೆನಡಿಕ್ಟ್ ಎಂಬುವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು, 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಸುನೀಲ್ ಎಂಬುವರು ಪ್ರತಿ ದೂರು ನೀಡಿದ್ದು ಬೆನಡಿಕ್ಟ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.