ADVERTISEMENT

ಉಡುಪಿ: 62 ಮಂದಿಯಲ್ಲಿ ಕೋವಿಡ್‌ ಸೋಂಕು

ಸೋಂಕಿತರ ಸಂಖ್ಯೆ 472ಕ್ಕೇರಿಕೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 16:18 IST
Last Updated 3 ಜೂನ್ 2020, 16:18 IST
   

ಉಡುಪಿ: ಜಿಲ್ಲೆಯಲ್ಲಿ ಬುಧವಾರ 62 ಮಂದಿಯಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದು, 43 ಪುರುಷರು, 15 ಮಹಿಳೆಯರು, ನಾಲ್ವರು ಮಕ್ಕಳು ಸೇರಿದ್ದಾರೆ. ಎಲ್ಲರಿಗೂ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಮಾಹಿತಿ ನೀಡಿದರು.

ಸೋಂಕಿತರ ಸಂಖ್ಯೆ 472ಕ್ಕೇರಿಕೆ: ಮಂಗಳವಾರ 150 ಸೋಂಕಿತ ಪ್ರಕರಣಗಳು ಕಾಣಿಸಿಕೊಂಡು ಉಡುಪಿ ರಾಜ್ಯದಲ್ಲೇ ಅತಿ ಹೆಚ್ಚು ಸೋಂಕಿತರು ಇರುವ ಜಿಲ್ಲೆಯಾಗಿತ್ತು. ಬುಧವಾರ 62 ಪ್ರಕರಣಗಳು ಪತ್ತೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದೆ. ಕಲಬುರಗಿಯಲ್ಲಿ ಒಂದೇ ದಿನ 105 ಪ್ರಕರಣಗಳು ಪತ್ತೆಯಾಗಿದ್ದು, ಮೊದಲ ಸ್ಥಾನಕ್ಕೇರಿದೆ.

ಸದ್ಯ ಉಡುಪಿಯಲ್ಲಿ 408 ಸಕ್ರಿಯ ಪ್ರಕರಣಗಳಿದ್ದು, 63 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಬುಧವಾರ 851 ವರದಿಗಳು ನೆಗೆಟಿವ್ ಬಂದಿದ್ದು, 4936 ವರದಿಗಳು ಬರುವುದು ಬಾಕಿ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.