ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ನಾಲ್ವರಲ್ಲಿ ಕೊರೊನಾ ಶಂಕಿತ ಲಕ್ಷಣಗಳು ಕಾಣಿಸಿಕೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಹರೈನ್ ಹಾಗೂ ಸೌದಿಯಿಂದ ಈಚೆಗೆ ಉಡುಪಿಗೆ ಮರಳಿದ್ದ ಇಬ್ಬರು ಮಹಿಳೆಯರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೌದಿಯಿಂದ ಬಂದಿದ್ದ 32 ವರ್ಷದ ವ್ಯಕ್ತಿಗೆ ಕುಂದಾಪುರದ ಸರ್ಕಾರಿ ಆಸ್ಪತ್ರೆ ಹಾಗೂ ಆಸ್ಟ್ರೇಲಿಯಾದಿಂದ ಬಂದಿರುವ 66 ವರ್ಷದ ವೃದ್ಧರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ವರ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬುಧವಾರ ಹಾಗೂ ಗುರುವಾರ ಕಳುಹಿಸಿದ್ದ 8 ಜನರ ವೈದ್ಯಕೀಯ ವರದಿ ಇನ್ನೂ ಬಂದಿಲ್ಲ ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.