ADVERTISEMENT

ಮೂವರು ಕೊರೊನಾ ವೈರಸ್‌ ಶಂಕಿತರು ಮಣಿಪಾಲ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2020, 7:05 IST
Last Updated 13 ಮಾರ್ಚ್ 2020, 7:05 IST
   

ಉಡುಪಿ: ಮಣಿಪಾಲ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳಿಗೆ ಶಂಕಿತ ಕೊರೊನಾ ಲಕ್ಷಣಗಳು ಕಂಡುಬಂದಿದ್ದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿಗಳು ಅಮೆರಿಕಾ, ಕುವೈತ್‌ ಹಾಗೂ ಮಲೇಷ್ಯಾದಿಂದ ಬಂದಿದ್ದರು ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳ ಗಂಟಲು ದ್ರವದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ವರದಿ ಬರಲು ಎರಡು ದಿನಗಳಾಗಲಿದೆ ಎಂದು ಡಿಎಚ್‌ಒ ಸುಧೀರ್‌ ಚಂದ್ರ ಸೂಡ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ADVERTISEMENT

ವಿದ್ಯಾರ್ಥಿಗಳಿಗೆ ಐಸೊಲೇಟೆಡ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.