ADVERTISEMENT

ಉಡುಪಿ ಜಿಲ್ಲೆಯಲ್ಲಿ ಮೊದಲ ಕೋವಿಡ್ ಸೋಂಕು ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2020, 8:27 IST
Last Updated 25 ಮಾರ್ಚ್ 2020, 8:27 IST
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್   

ಉಡುಪಿ: ಜಿಲ್ಲೆಯಲ್ಲಿ ಮೊದಲ ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿದೆ. ಮಾರ್ಚ್ 18ರಂದು ದುಬೈನಿಂದ ಉಡುಪಿಗೆ ಬಂದಿದ್ದ 34 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು.

23ರಂದು ಜಿಲ್ಲಾ ಆಸ್ಪತ್ರೆಗೆ ಆತ ದಾಖಲಾಗಿದ್ದು ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಾಥಮಿಕ ವರದಿ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದ ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದ್ದಂತೆ, ಸೋಂಕಿತನ ಸಂಪರ್ಕದಲ್ಲಿ ಇದ್ದವರ ಮಾಹಿತಿ ಕಲೆಹಾಕುವ ಕಾರ್ಯ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT