ADVERTISEMENT

ಗೋಪಾಡಿ ಬಿಸಿಎಂ ಹಾಸ್ಟೆಲ್‌ ಕಂಟೈನ್‌ಮೆಂಟ್ ವಲಯ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 16:13 IST
Last Updated 5 ಏಪ್ರಿಲ್ 2021, 16:13 IST

ಉಡುಪಿ: ಕುಂದಾಪುರ ತಾಲ್ಲೂಕಿನ ಗೋಪಾಡಿಯಲ್ಲಿರುವ ಹಿಂದುಳಿದ ವರ್ಗಗಳ ಹಾಸ್ಟೆಲ್‌ನಲ್ಲಿರುವ 12 ವಿದ್ಯಾರ್ಥಿಗಳಲ್ಲಿ ಕೋವಿಡ್‌ ದೃಢಪಟ್ಟಿದ್ದು, ಹಾಸ್ಟೆಲ್‌ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯವನ್ನಾಗಿ ಮಾಡಲಾಗಿದೆ.

ಹಾಸ್ಟೆಲ್‌ನಲ್ಲಿ 80 ವಿದ್ಯಾರ್ಥಿಗಳಿದ್ದು, ಎಲ್ಲರಿಗೂ ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, 12 ಮಂದಿಯಲ್ಲಿ ಮಾತ್ರ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕಿತರಿಗೂ ಕೋವಿಡ್ ಪರೀಕ್ಷೆ ಮಾಡಲಾಗುವುದು. ಹಾಸ್ಟೆಲ್ ಸುತ್ತಮುತ್ತಲಿನ ಪ್ರದೇಶವನ್ನು ಬಫರ್‌ ವಲಯವಾಗಿ ಮಾಡಲಾಗಿದ್ದು, ಅಲ್ಲಿ ವಾಸವಿರುವ ಜನರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸೋಮವಾರ 59 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, 27 ಪುರುಷರಲ್ಲಿ ಹಾಗೂ 32 ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಲ್ಲಿ ಉಡುಪಿಯ 18, ಕುಂದಾಪುರದ 35 ಹಾಗೂ ಕಾರ್ಕಳದ 6 ಮಂದಿ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.