ADVERTISEMENT

ಒಂದು ಕಡೆ ಪಾಸಿಟಿವ್‌, ಮತ್ತೊಂದು ಕಡೆ ನೆಗೆಟಿವ್‌

ಚಿತ್ರದುರ್ಗದ ಕ್ಯಾನ್ಸರ್ ಪೀಡಿತೆ ಪರೀಕ್ಷಾ ವರದಿಯಲ್ಲಿ ಗೊಂದಲ

​ಪ್ರಜಾವಾಣಿ ವಾರ್ತೆ
Published 24 ಮೇ 2020, 15:50 IST
Last Updated 24 ಮೇ 2020, 15:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ ಚಿತ್ರದುರ್ಗದ ಬಾಲಕಿಯ ವೈದ್ಯಕೀಯ ಪರೀಕ್ಷೆಯಲ್ಲಿ ಗೊಂದಲಗಳಿರುವ ಕಾರಣ, ಮತ್ತೊಮ್ಮೆ ಪರೀಕ್ಷೆ ಮಾಡಲು ಬಾಲಕಿಯ ಗಂಟಲ ದ್ರವದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ತಿಳಿಸಿದರು.

ಬಾಲಕಿ ತುರ್ತು ಚಿಕಿತ್ಸೆಗೆ ಕೆಎಂಸಿ ಆಸ್ಪತ್ರೆಗೆ ದಾಖಲಾದ ಕೂಡಲೇ ಆಕೆಗೆ ಕೋವಿಡ್ ಪರೀಕ್ಷೆಗೊಳಪಡಿಸಿ, ಗಂಟಲ ದ್ರವವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಕೋವಿಡ್ ಸೋಂಕು ಇರುವುದು ಪತ್ತೆಯಾಗಿತ್ತು. ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಮರು ಪರೀಕ್ಷೆ ಮಾಡಿದಾಗ ನೆಗೆಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಬಾಲಕಿಯ ಮಾದರಿಯನ್ನು ಕಳುಹಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT