ADVERTISEMENT

ಉಡುಪಿ: 110 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 15:48 IST
Last Updated 14 ಏಪ್ರಿಲ್ 2021, 15:48 IST

ಉಡುಪಿ: ಜಿಲ್ಲೆಯಲ್ಲಿ ಬುಧವಾರ 110 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಉಡುಪಿಯ 71, ಕುಂದಾಪುರದ 26, ಕಾರ್ಕಳದ 8 ಹಾಗೂ ಬೇರೆ ಜಿಲ್ಲೆಯ ಐವರು ಮೃತಪಟ್ಟಿದ್ದಾರೆ.

ಸೋಂಕಿತರಲ್ಲಿ 62 ಪುರುಷರು ಹಾಗೂ 48 ಮಹಿಳೆಯರಿದ್ದು, 50 ಮಂದಿಯಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡರೆ, 60 ಜನರಿಗೆ ಲಕ್ಷಣಗಳು ಕಾಣಿಸಿಕೊಂಡಿಲ್ಲ. 20 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ 90 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 26,258ಕ್ಕೆ ಏರಿಕೆಯಾಗಿದ್ದು, 474 ಸಕ್ರಿಯ ಸೋಂಕಿತರು ಇದ್ದಾರೆ. 25592 ಸೋಂಕಿತರು ಗುಣಮುಖರಾಗಿದ್ದಾರೆ. 192 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.