ADVERTISEMENT

ಉಡುಪಿ: 163 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 15:46 IST
Last Updated 19 ಏಪ್ರಿಲ್ 2021, 15:46 IST

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 163 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಉಡುಪಿಯ 85, ಕುಂದಾಪುರದ 36, ಕಾರ್ಕಳದ 40 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.

ಸೋಂಕಿತರಲ್ಲಿ 75 ಮಹಿಳೆಯರು ಹಾಗೂ 78 ಪುರುಷರು ಇದ್ದಾರೆ. 60 ಸೋಂಕಿತರಿಗೆ ರೋಗದ ಲಕ್ಷಣಗಳು ಇದ್ದರೆ, 103 ಮಂದಿಯಲ್ಲಿ ಲಕ್ಷಣಗಳು ಕಾಣಿಸಿಕೊಂಡಿಲ್ಲ. 26 ಮಂದಿ ಆಸ್ಪತ್ರೆಯಲ್ಲಿ, ಉಳಿದ 137 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 26,903ಕ್ಕೆ ಏರಿಕೆಯಾಗಿದ್ದು, 746 ಸಕ್ರಿಯ ಸೋಂಕಿತರು ಇದ್ದಾರೆ. 25,964 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 193 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.