ADVERTISEMENT

ಉಡುಪಿ: 21 ಮಂದಿಯಲ್ಲಿ ಕೋವಿಡ್ ಸೋಂಕು

ಸೋಂಕಿತರ ಸಂಖ್ಯೆ 1,026ಕ್ಕೇರಿಕೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 14:47 IST
Last Updated 14 ಜೂನ್ 2020, 14:47 IST

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 21 ಕೋವಿಡ್–19‌ ಸೋಂಕು ಪ್ರಕರಣಗಳು ದೃಢಪಟ್ಟಿವೆ. 18 ಮಂದಿಗೆ ಮಹಾರಾಷ್ಟ್ರ ಸಂಪರ್ಕವಿದ್ದು, ತಮಿಳುನಾಡು, ಉತ್ತರ ಪ್ರದೇಶದಿಂದ ಬಂದಿದ್ದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಪಿ–5,667 ಸಂಪರ್ಕದಿಂದ ಒಬ್ಬರಿಗೆ ಸೋಂಕು ತಗುಲಿದೆ.

ಸೋಂಕಿತರ ಪೈಕಿ 15 ಪುರುಷರು, ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ. ಎಲ್ಲರಿಗೂ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.‌

77 ಮಂದಿ ಮಾದರಿ ರವಾನೆ

ADVERTISEMENT

ತೀವ್ರ ಉಸಿರಾಟದ ಸಮಸ್ಯೆ, ಶೀತದ ಲಕ್ಷಣ, ಸೋಂಕಿತರ ಜತೆ ನೇರ ಸಂಪರ್ಕ, ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಬಂದ 77 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.

ಭಾನುವಾರ 44 ಮಂದಿಯ ವರದಿ ನೆಗೆಟಿವ್ ಬಂದಿದ್ದು, 103 ವರದಿಗಳು ಬರುವುದು ಬಾಕಿ ಇದೆ. ಸೋಂಕಿನ ಲಕ್ಷಣಗಳು ಕಂಡುಬಂದ 9 ಮಂದಿಗೆ ಐಸೊಲೇಷನ್‌ ವಾರ್ಡ್‌ಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,026ಕ್ಕೇರಿಕೆಯಾಗಿದ್ದು, 789 ಮಂದಿ ಗುಣಮುಖರಾಗಿ ಆಸಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 235 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.